ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ರಾಜ್ಯ ಹೇಳಿಕೆ :ಸಚಿವ ಕತ್ತಿ ವಿರುದ್ಧ ಆಕ್ರೋಶ

Last Updated 20 ಅಕ್ಟೋಬರ್ 2012, 4:50 IST
ಅಕ್ಷರ ಗಾತ್ರ

ಗದಗ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟಿರುವ ಕೃಷಿ ಸಚಿವ ಉಮೇಶ ಕತ್ತಿ ಅವರ ಭಾವಚಿತ್ರವನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸುಟ್ಟು ಹಾಕಿದರು. ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಜಮಾವಣೆಗೊಂಡ ಕಾರ್ಯಕರ್ತರು ಕೃಷಿ ಸಚಿವ ಉಮೇಶ ಕತ್ತಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತ್ಯೇಕ ರಾಜ್ಯ ಬೇಕು ಎಂದು ಕೂಗಿರುವ ಸಚಿವ ಕತ್ತಿ ಅವರನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ ಸಂಪುಟದಿಂದ ತೆಗೆದು ಹಾಕಬೇಕು ಹಾಗೂ ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಸಮೃದ್ಧ ನವಕರ್ನಾಟಕವನ್ನು ಛಿದ್ರ ಮಾಡಲು ಹೊರಟಿರುವ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಂತಹ ನಾಯಕರು ರಾಜ್ಯಕ್ಕೆ ಅವಶ್ಯಕತೆ ಇಲ್ಲ. ಇಲ್ಲದಿದ್ದರೆ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್.ಅಬ್ಬಿಗೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಜಯಕುಮಾರ ಬ್ಯಾಳಿ, ಸಿದ್ದು ಪಾಟೀಲ, ನಿಂಗನಗೌಡ ಮಾಲಿ ಪಾಟೀಲ, ರವಿಕೊಟ್ಟಿಗವಾಡ, ರಾಜಶೇಖರ ಹಿರೇಮಠ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT