ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಸಿಂಗ್ ರಾಜೀನಾಮೆ ಸಲ್ಲಿಕೆ

Last Updated 17 ಮೇ 2014, 10:13 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಯುಪಿಎ ಮೈತ್ರಿಕೂಟದ ದಶಕದ ಅಧಿಕಾರಾವಧಿ ಶನಿವಾರ ಕೊನೆಗೊಂಡ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದರು.

81 ವರ್ಷದ ಪ್ರಧಾನಿ ಸಿಂಗ್ ಅವರು ರೇಸ್‌ಕೋರ್ಸ್ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಣವ್ ಅವರಿಗೆ ತಮ್ಮ ಸಚಿವ ಸಂಪುಟದ ಎಲ್ಲ ಸದಸ್ಯರ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದರು.

`ಮನಮೋಹನ್ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ತಮ್ಮ ಸಹದ್ಯೋಗಿಗಳೊಂದಿಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ' ಎಂದು ರಾಷ್ಟ್ರಪತಿ ಭವನದ ಪ್ರಕಟನೆ ತಿಳಿಸಿದೆ.

ಇದೇ ವೇಳೆ ಪ್ರಧಾನಿ ಅವರು ಶಿಷ್ಟಾಚಾರದಂತೆ ತಮ್ಮ ರಾಜೀನಾಮೆ ಪತ್ರದೊಂದಿಗೆ 15ನೇ ಲೋಕಸಭೆಯನ್ನು ವಿಸರ್ಜಿಸುವಂತೆ ಸಚಿವಸಂಪುಟದ ಶಿಫಾರಸು ಪತ್ರವನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದರು.

ರಾಷ್ಟ್ರಪತಿಗಳ ಭೇಟಿಗೂ ಮುನ್ನ ಪ್ರಧಾನಿ ಅವರು ಔಪಚಾರಿಕವಾಗಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT