ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಹುದ್ದೆ ಆಕಾಂಕ್ಷಿ ಅಲ್ಲ

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಪಟ್ನಾ (ಐಎಎನ್‌ಎಸ್): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯೇ  ಪ್ರಧಾನಿ ಅಭ್ಯರ್ಥಿಯಾಗಿರುತ್ತಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಸೋಮವಾರ ತಿಳಿಸಿದ್ದಾರೆ.

ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಬಿಜೆಪಿ ಒಪ್ಪಿಗೆ ನೀಡಲು ನಿರಾಕರಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

`ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ' ಎಂದು ಸ್ಪಷ್ಟಪಡಿಸಿರುವ ನಿತೀಶ್ ಕುಮಾರ್, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ನಿತೀಶ್ ಕುಮಾರ್ ಅವರು ಜೆಡಿಯು ಪಕ್ಷ ಮೋದಿ ಅವರನ್ನು ಎನ್‌ಡಿಎ ಪ್ರಧಾನಿ ಅಭ್ಯರ್ಥಿನ್ನಾಗಿ ಬಿಂಬಿಸಲು ವಿರೋಧ ವ್ಯಕ್ತಪಡಿಸಿದ್ದರು.ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸಿದರೆ, ಆ ಕ್ಷಣದಲ್ಲೇ ಎನ್‌ಡಿಎ ಮಿತ್ರಕೂಟದಿಂದ ಹೊರಗುಳಿಯುವುದಾಗಿ ಹೇಳಿದ್ದರು.

ಜೂನ್ 2010ರಲ್ಲಿ ಪಟ್ನಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ವೇಳೆ ಪತ್ರಿಕೆಯೊಂದರಲ್ಲಿ ಮೋದಿ ಜತೆ ತನ್ನ ಭಾವಚಿತ್ರವಿರುವ ಜಾಹಿರಾತು ಪ್ರಕಟಿಸಿದ್ದಕ್ಕೂ ನಿತೀಶ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT