ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪ್ರವಾಸಿಗರ ಸಂಖ್ಯೆ ಹೆಚ್ಚಳ; ಸೌಲಭ್ಯಗಳ ಕೊರತೆ'

Last Updated 5 ಡಿಸೆಂಬರ್ 2012, 6:56 IST
ಅಕ್ಷರ ಗಾತ್ರ

ಹಳೇಬೀಡು: ಬೇಲೂರು, ಹಳೇಬೀಡಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೂ ಸೌಲಭ್ಯ ಮಾತ್ರ ಮರೀಚಿಕೆಯಾಗಿದೆ. ವಸತಿ ಸೌಲಭ್ಯ ಕೊರತೆ ಹಿನ್ನೆಲೆಯಲ್ಲಿ ಪ್ರವಾಸಿಗರು ವಾಸ್ತವ್ಯ ಮಾಡಿ ಶಿಲ್ಪಕಲಾ ತಾಣಗಳನ್ನು ಸಂಪೂರ್ಣವಾಗಿ ವೀಕ್ಷಿಸಲು ಅವಕಾಶ ಇಲ್ಲದಂತಾಗಿದೆ ಎಂದು ಶಾಸಕ ವೈ.ಎನ್.ರುದ್ರೇಶ್‌ಗೌಡ ವಿಷಾದ ವ್ಯಕ್ತಪಡಿಸಿದರು.

ಇಲ್ಲಿನ ಹೊಯ್ಸಳೇಶ್ವರ ರಥೋತ್ಸ ವದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾ ಡಿದರು. ಹಳೇಬೀಡು, ಬೇಲೂರು ಸಂಪರ್ಕ ಕಲ್ಪಿಸುವ ರಸ್ತೆಗಳು ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಿವೆ. ಈ ತಾಣಗಳಲ್ಲಿ ಪ್ರವಾಸಿಗರಿಗಾಗಿ ಸೂಕ್ತ ಸೌಲಭ್ಯಗಳು ಆಗಬೇಕಿದೆ.

ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಶೀಘ್ರದಲ್ಲಿಯೇ ಕಾರ್ಯಪ್ರವೃತ ವಾಗಬೇಕು ಎಂದು ಆಗ್ರಹಿಸಿದರು. ಸರ್ಕಾರ ಹಾಗೂ ಸಚಿವರ ಜೊತೆ ಬೇಲೂರು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಹಲವು ಬಾರಿ ಚರ್ಚಿಸಿದ್ದರೂ ಇತ್ತ ಗಮನ ಹರಿಸುತ್ತಿಲ್ಲ ಎಂದು ಆರೋಪಿ ಸಿದರು. ಪುಷ್ಪಗಿರಿಯ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಾತ್ರೆ ಉತ್ಸವಗಳು ಹಿಂದಿನಿಂದ ನಡೆದು ಬಂದ ಪರಂಪರೆಯನ್ನು ಮುಂದಿನ ಪಿಳಿಗೆಗೆ ತಿಳಿಸುವ ರಾಯಭಾರಿಯಾಗಿವೆ ಎಂದರು.

ಹೊಯ್ಸಳ ಟ್ರಸ್ಟ್ ಅಧ್ಯಕ್ಷ  ಎಚ್.ಎಸ್.ಶಿವಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಾ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯಶೀಲ ಜಯಶಂಕರ್, ಹೇಮಾವತಿ ಮಂಜು ನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಆರ್.ಲಿಂಗಪ್ಪ, ಬಿಜೆಪಿ ಹಿರಿಯ ಮುಖಂಡ ಬಿ.ಶಿವರುದ್ರಪ್ಪ, ಹಳೇಬೀಡು ಪ್ರಾಧಿಕಾರ ಅಧ್ಯಕ್ಷ ಗೋವಿಂದಪ್ಪ, ರೈತ ಮುಖಂಡ ಚನ್ನೇಗೌಡ, ಕರವೇ ತಾಲ್ಲೂಕು ಘಟಕ ಉಪಾಧ್ಯಕ್ಷ ಸೀತಾರಾಮು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT