ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ನೀಡಿಕೆಗೆ ಪ್ರಾದೇಶಿಕ, ಸಾಮಾಜಿಕ ಸಮತೋಲನ ಮುಖ್ಯ

Last Updated 10 ಫೆಬ್ರುವರಿ 2011, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುವ ಪ್ರಕ್ರಿಯೆಯಲ್ಲಿ ಸಾಮಾಜಿಕ ಮತ್ತು ಪ್ರಾದೇಶಿಕ ಸಮತೋಲನ ಸಾಧಿಸಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು. ಬೆಂಗಳೂರು ಕಲಾ ಪ್ರತಿಷ್ಠಾನವು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ‘ಕಲಾಧ್ಯಾನ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಾಹಿತ್ಯ, ಕಲೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುವ ಪ್ರಕ್ರಿಯೆಯಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಅಸಮತೋಲನೆ ಇದೆ. ಭೌಗೋಳಿಕ ಅಂಶ ಅಥವಾ ವ್ಯಕ್ತಿ ಕೇಂದ್ರಿತವಾಗಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.ಇದರಿಂದ ನಿಜವಾದ ಸಾಧಕರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಪ್ರತಿಭೆಯ ಅನನ್ಯತೆ, ಸಾಮಾಜಿಕ ಮತ್ತು ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಅರ್ಹ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ದೃಷ್ಟಿಕೋನವನ್ನು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ರೂಢಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.

‘ವಿವಿಧ ಕಲಾ ಪ್ರಕಾರಗಳ ನಡುವೆ ಸಂಬಂಧ ಬೆಸೆಯುವ ಪರಿಸರ ನಿರ್ಮಿಸಬೇಕು. ಮಾರುಕಟ್ಟೆ ವಿಷಯವೇ ಮುಖ್ಯವಾಗುತ್ತಿರುವ ಇಂದಿನ ಸಂದರ್ಭದಲ್ಲಿ ಸಾಹಿತಿಗಳು ಹಾಗೂ ಕಲಾವಿದರು ತಮ್ಮ ಮನಸುಗಳು ಮಾರಾಟವಾಗದಂತೆ ಎಚ್ಚರ ವಹಿಸಬೇಕು. ಅಲ್ಲದೇ ಉದ್ಯಮದ ಜತೆಗೆ ಮಾಧ್ಯಮದ ಸೂಕ್ಷ್ಮತೆಗಳನ್ನು ಸಹ ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ಕಲಾ ಪ್ರಕಾರಗಳು ಹಣ ಸಂಪಾದನೆಯ ಉದ್ಯಮವಾಗಿ ಪರಿವರ್ತನೆಯಾಗುತ್ತವೆ’ ಎಂದರು.

ಕಲಾವಿದರಾದ ಪ.ಸ.ಕುಮಾರ್, ಮಾನಯ್ಯ ನಾ.ಬಡಿಗೇರ ಅವರಿಗೆ ಕಲಾಧ್ಯಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಜೆ.ಎಸ್.ಖಂಡೇರಾವ್, ವಿಮರ್ಶಕ ಚಿ.ಸು.ಕೃಷ್ಣ ಸೆಟ್ಟಿ, ಕಲಾ ಚಿಂತಕ, ಪ್ರಜಾವಾಣಿ ಹಿರಿಯ ಪತ್ರಕರ್ತ ದೇವು ಪತ್ತಾರ್, ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣ ರಾಯಚೂರು, ಕಾರ್ಯದರ್ಶಿ ಓ. ವೆಂಕಟೇಶ್ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT