ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಸ್ವೀಕರಿಸಿದ ಸಿಂಧು

Last Updated 24 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಭರವಸೆಯ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಮಂಗಳವಾರ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.

ಆಗಸ್ಟ್‌ 31ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. ಆದರೆ, ಸಿಂಧು ಇಂಡಿಯನ್‌ ಬ್ಯಾಡ್ಮಿಂಟನ್‌ ಲೀಗ್‌ನಲ್ಲಿ ಪಾಲ್ಗೊಂಡಿದ್ದ ಕಾರಣ ಆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಆದ್ದರಿಂದ ಕೇಂದ್ರ ಕ್ರೀಡಾ ಸಚಿವ ಜಿತೇಂದ್ರ ಸಿಂಗ್‌ ಮಂಗಳವಾರ ಪ್ರಶಸ್ತಿ ಪ್ರದಾನ ಮಾಡಿದರು.

18 ವರ್ಷದ ಹೈದರಾಬಾದ್‌ನ ಆಟಗಾರ್ತಿ ಹೋದ ತಿಂಗಳು ನಡೆದ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಮಲೇಷ್ಯಾ ಓಪನ್‌ ಟೂರ್ನಿಯಲ್ಲೂ ಚಾಂಪಿಯನ್ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT