ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಿದ್ಧ ಕಲಾವಿದರಿಗೆ ಆಹ್ವಾನ

Last Updated 1 ಫೆಬ್ರುವರಿ 2011, 6:30 IST
ಅಕ್ಷರ ಗಾತ್ರ

ಶಿರಸಿ : ಫೆ.14 ಮತ್ತು 15ರಂದು ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವಕ್ಕೆ ಉತ್ತಮ ಕಲಾವಿದರನ್ನು ಆಹ್ವಾನಿಸುವಂತೆ ವಿನಂತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಹೇಳಿದರು.

ಸಹಾಯಕ ಆಯುಕ್ತರ ಕಚೇರಿಯಲ್ಲಿ ಸೋಮವಾರ ಎಲ್ಲ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಸಿದ್ಧ ಕಲಾವಿದರ ಜೊತೆಗೆ
ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಒದಗಿಸಲು ತಿಳಿಸಲಾಗಿದೆ. ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಕ್ಕೆ ಹೆಸರಾಂತ ಕಲಾವಿದರ ತಂಡಗಳನ್ನು ಕಳುಹಿಸುವಂತೆ ವಿನಂತಿಸಲಾಗಿದೆ.

ಸರ್ಕಾರ ಕದಂಬೋತ್ಸವಕ್ಕೆ ರೂ. 40ಲಕ್ಷ ಘೋಷಣೆ ಮಾಡಿದ್ದು, ರೂ. 20 ಲಕ್ಷ ಮಂಜೂರಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕದಂಬೋತ್ಸವದ ಯಶಸ್ಸಿಗೆ 12 ಸಮಿತಿಗಳನ್ನು ರಚನೆ ಮಾಡಲಾಗಿದೆ. ಸ್ವಾಗತ ಮತ್ತು ಹಣಕಾಸು ಸಮಿತಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಸಾಂಸ್ಕೃತಿಕ ಸಮಿತಿಗೆ ಶಾಸಕ ವಿ.ಎಸ್.ಪಾಟೀಲ, ಮೆರವಣಿಗೆ ಸಮಿತಿಗೆ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಅಶೀಸರ ಅಧ್ಯಕ್ಷರಾಗಿದ್ದಾರೆ. ಪುರುಷ ಮತ್ತು ಮಹಿಳೆಯರಿಗೆ ಕಬ್ಬಡ್ಡಿ ಪಂದ್ಯಗಳನ್ನು ಏರ್ಪಡಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನೀಡಿ ಉತ್ಸವವನ್ನು ಜನಾಕರ್ಷಣೆಗೊಳಿಸಲು ಕ್ರಮವಹಿಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಕೈಪಿಡಿ ಸಿದ್ಧ ಪಡಿಸಲಾಗುತ್ತಿದೆ.ಕದಂಬೋತ್ಸವದ ಅಂಗವಾಗಿ ಶಿರಸಿಯ ಮಾರಿಕಾಂಬಾ ದೇವಸ್ಥಾನ ಮತ್ತು ಬನವಾಸಿಯ ಮಧುಕೇಶ್ವರ ದೇವಸ್ಥಾನಗಳಿಗೆ ವಿಶೇಷ ವಿದ್ಯುತ್ ಅಲಂಕಾರ ಮಾಡಲಾಗುತ್ತದೆ ಎಂದು ಹೇಳಿದರು.

ಕದಂಬೋತ್ಸವದ ಜೊತೆಗೆ ಕೃಷಿ ಮೇಳವನ್ನು ಸಂಘಟಿಸಲಾಗಿದ್ದು, ಕೃಷಿ ಸಂಬಂಧಿತ 40 ಮಳಿಗೆಗಳು ಇರುತ್ತವೆ. ಕದಂಬೋತ್ಸವದ ವಸ್ತು ಪ್ರದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಸ್ವಸಹಾಯ ಸಂಘಗಳು ಫೆ.10ರ ಒಳಗೆ ಹೆಸರು ನೋಂದಾಯಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಸಹಾಯಕ ಆಯುಕ್ತ ಜಿ.ಜಗದೀಶ, ತಹಸೀಲ್ದಾರ ಎಚ್.ಕೆ.ಕೃಷ್ಣಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT