ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಚ್ಯವಸ್ತು-ಸಂಗ್ರಹಾಲಯ ಇಲಾಖೆ ನಿರ್ದೇಶಕ ಅಮಾನತು

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮೈಸೂರು: ಸರ್ಕಾರದಿಂದ ಮಂಜೂರಾತಿ ಪಡೆಯದೆ ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯ ಮೈಸೂರು ಕೇಂದ್ರ ಕಚೇರಿಯಲ್ಲಿ ಸಭಾಂಗಣ ನವೀಕರಿಸುವ ಕಾಮಗಾರಿಯನ್ನು ಮುಗಿಸಿದ ಇಲಾಖೆಯ ನಿರ್ದೇಶಕ ಡಾ.ಆರ್.ಗೋಪಾಲ್ ಅವರನ್ನು ಸರ್ಕಾರ ಅಮಾನತು ಮಾಡಿ, ಶಿಸ್ತಿನ ಕ್ರಮವನ್ನು ಕಾದಿರಿಸಿದೆ.

2010ರಲ್ಲಿ ನವೀಕರಣ ಕಾಮಗಾರಿಯನ್ನು ಮುಗಿಸಿ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಎಂಜಿನಿಯರುಗಳಿಗೆ ಕಾಮಗಾರಿಯ ಗುತ್ತಿಗೆದಾರರಿಗೆ ಬಿಲ್ ಸಂದಾಯ ಮಾಡಲು ಸಂಚು ರೂಪಿಸಿರುವುದರಿಂದ ಗೋಪಾಲ್ ಅವರ ವಿರುದ್ಧ ವಿಚಾರಣೆ ನಡೆಸುವಂತೆ ಸಿದ್ಧಾರ್ಥನಗರದ ವರದರಾಜು ಎಂಬುವರು ದೂರು ಸಲ್ಲಿಸಿದ ಮೇರೆಗೆ ಕನ್ನಡ ಸಂಸ್ಕೃತಿ, ವಾರ್ತಾ ಮತ್ತು ಪ್ರವಾಸೋದ್ಯಮ ಇಲಾಖೆ ಉಪ ಕಾರ್ಯದರ್ಶಿ ಪ್ರಾಥಮಿಕ ತನಿಖೆ ನಡೆಸಿ ಮೇಲಿನ ಕ್ರಮ ಕೈಗೊಂಡಿದ್ದಾರೆ.

ಈಗಾಗಲೇ ನಿರ್ವಹಿಸಿದ ಕಾಮಗಾರಿಯನ್ನು ಸಕ್ರಮಗೊಳಿಸುವ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ತಾಂತ್ರಿಕ ಸಲಹಾ ಸಮಿತಿ ಅನಮೋದನೆ ಪಡೆದು ಕಾಮಗಾರಿ ನಿರ್ವಹಿಸಲು ಕಳೆದ ಜು.8 ರಂದು ಟೆಂಡರ್‌ಗೆ ಪತ್ರಿಕಾ ಪ್ರಕಟಣೆ ಕರೆದಿರುವುದು ತನಿಖೆಯಿಂದ ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT