ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪದವಿ ಕಡ್ಡಾಯ

Last Updated 20 ಫೆಬ್ರುವರಿ 2011, 16:15 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮೂಲ ಶಿಕ್ಷಣದಲ್ಲಿ ಸುಧಾರಣೆ ತರಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪದವಿಯನ್ನು ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಡೆಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ, ಶಾಲಾ ಶಿಕ್ಷಣ ಸಚಿವ ರಾಜೇಂದ್ರ ದರ್ದಾ ಅವರು ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶಿಕ್ಷಕರ ಅರ್ಹತಾ ಮಾನದಂಡಗಳಲ್ಲಿ ಬದಲಾವಣೆ ತರುವ ಸಲಹೆ ನೀಡಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮೂರು ಲಕ್ಷಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಇವರಲ್ಲಿ ಕೆಲವರು ಪದವೀಧರರಲ್ಲ. ಹೊಸ ಪ್ರಸ್ತಾವಕ್ಕೆ ಸಂಪುಟದ ಅನುಮೋದನೆ ಸಿಕ್ಕಿದರೆ ನಿಗದಿತ ಕಾಲಮಿತಿಯಲ್ಲಿ ಪದವಿ ಪಡೆಯಲು ಇವರಿಗೆ ಶಿಕ್ಷಣ ಇಲಾಖೆ ಸೂಚಿಸಲಿದೆ ಎಂದು ಅವರು ಹೇಳಿದ್ದಾರೆ.

ಈಗಿರುವ ನಿಯಮದ ಪ್ರಕಾರ ಪ್ರಾಥಮಿಕ ಶಿಕ್ಷಕ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 12ನೇ ತರಗತಿಯಲ್ಲಿ ಕನಿಷ್ಠ ಶೇ 50ರಷ್ಟು ಅಂಕ ಗಳಿಸಿ ಡಿಇಡಿ ಪೂರೈಸಿರಬೇಕು.

ಹೊಸ ನಿಯಮ ಪ್ರತಿ ವರ್ಷ ರಾಜ್ಯದಲ್ಲಿ ಉದ್ಯೋಗ ಪಡೆಯುವ 14 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ಮೇಲೆಮೇಲೆ ನೇರ ಪರಿಣಾಮ ಬೀರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT