ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ .ಗೋವಿಂದ ವರದಿ ತಿರಸ್ಕರಿಸಲು ಆಗ್ರಹ

Last Updated 6 ಅಕ್ಟೋಬರ್ 2012, 9:40 IST
ಅಕ್ಷರ ಗಾತ್ರ

ಹಾಸನ: ಕಡಿಮೆ ಹಾಜರಾತಿ ಇರುವ ಕನ್ನಡ ಶಾಲೆಗಳನ್ನು ಮುಚ್ಚುವಂತೆ ಸಲಹೆ ನೀಡಿರುವ ಪ್ರೊ .ಆರ್.ಗೋವಿಂದ ಅವರ ವರದಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ  ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

`ರಾಜ್ಯ ಸರ್ಕಾರ ಶಾಲಾ ಶಿಕ್ಷಣದ ಉನ್ನತೀಕರಣ ಹಾಗೂ ಪುನರ್ ಸಂಘಟನೆ ಹೆಸರಿನಲ್ಲಿ ಪ್ರೊ .ಗೋವಿಂದ ವರದಿಯನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿನ 12,740 ಕನ್ನಡ ಸಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸಂವಿಧಾನ ವಿರೋಧಿ ಕಾರ್ಯವಾಗುತ್ತದೆ. ಸರ್ಕಾರ ತಾನು ಬಡ, ಹಿಂದುಳಿದ,  ದಲಿತ ವರ್ಗದ ವಿರೋಧಿ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಲು ಹೊರಟಿದೆ ಎಂದು ಆಪಾದಿಸಿದರು.

ಕಳೆದ ವರ್ಷ 3174 ಕನ್ನಡ ಶಾಲೆಯನ್ನು ಮುಚ್ಚಿದ್ದ ಸರ್ಕಾರ ಈಗ 12,740 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದರಿಂದ ಲಕ್ಷಾಂತರ ಬಡ ವಿದ್ಯಾರ್ಥಿಗಳು ಬೀದಿಪಾಲಾಗುವುದರ ಜತೆಗೆ 50 ಸಾವಿರ ಶಿಕ್ಷಕರು ಹಾಗೂ 20 ಸಾವಿರ ಬಿಸಿಯೂಟ ನೌಕರರು ಕೆಲಸದಿಂದ ವಂಚಿತರಾಗುತ್ತಾರೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಸರ್ಕಾರ ಈ ವರ್ಷ ವಿವಿಧ ಖಾಸಗಿ ಶಾಲೆಗಳಲ್ಲಿ 1,12,474 ಬಡ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕಿತ್ತು, ಆದರೆ ಕೇವಲ 41 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಎಸ್.ಎಫ್.ಐ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಪೃಥ್ವಿ, ವಿಜಯೇಂದ್ರ, ಅನ್‌ಷಾದ, ಮಂಜುನಾಥ್, ಪ್ರದೀಪ್‌ಕುಮಾರ್, ಪ್ರಥಮ್, ಮಣಿಕಂಠ, ಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT