ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲೆ ಕೊಠಡಿಗೆ ಶಂಕುಸ್ಥಾಪನೆ

Last Updated 9 ಜುಲೈ 2013, 19:44 IST
ಅಕ್ಷರ ಗಾತ್ರ

ಹೊಸಕೋಟೆ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಅಡಿಯಲ್ಲಿ ಬಾಲಕರ ಹಾಗೂ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವ 24 ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎನ್.ನಾಗರಾಜು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ ಯೋಜನೆ ಅಡಿ ತಾಲ್ಲೂಕಿಗೆ 8.20 ಕೋಟಿ ರೂಪಾಯಿ ಮಂಜೂರಾಗಿದ್ದು ತಾಲ್ಲೂಕಿನಲ್ಲಿರುವ ಪ್ರೌಢಶಾಲೆಗಳಿಗೆ 66 ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲಾಗುವುದು ಎಂದರು.

ಶಾಲಾ, ಕಾಲೇಜುಗಳಲ್ಲಿ ಸೌಲಭ್ಯಗಳ ಕೊರತೆ ಇದ್ದು ಅದನ್ನು ನಿವಾರಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT