ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 3, 4ರಂದು ಕಲಾ ಶಿಕ್ಷಣ ಸಮ್ಮೇಳನ

Last Updated 20 ಜನವರಿ 2012, 19:35 IST
ಅಕ್ಷರ ಗಾತ್ರ

ಬೆಂಗಳೂರು: `ಗಯಟೆ ಸಂಸ್ಥೆ, ಮ್ಯಾಕ್ಸ್‌ಮುಲ್ಲರ್ ಭವನ ಮತ್ತು ಇಂಡಿಯಾ ಫೌಂಡೇಶನ್ ಆಫ್ ದಿ ಆರ್ಟ್ಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ `ಕಲಾ ಶಿಕ್ಷಣ~  ಸಮ್ಮೇಳನವನ್ನು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ನಲ್ಲಿ ಫೆಬ್ರುವರಿ 3 ಮತ್ತು 4 ರಂದು ಹಮ್ಮಿಕೊಳ್ಳಲಾಗಿದೆ ಎಂದು ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಮೋಲ್ ಇರಾನಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಸರ್ಕಾರಿ ಶಾಲೆಗಳ ಶಿಕ್ಷಕರಿಗಾಗಿ `ಕಲಿ-ಕಲಿಸು~ ಹೆಸರಿನ ಕಲೆಗಳ ಬೋಧನಾ ತರಬೇತಿ ಯೋಜನೆಯನ್ನು 2009 ರಿಂದ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ~ ಎಂದರು.

`ಕಲೆಗಳ ಶಿಕ್ಷಣ, ವೈವಿಧ್ಯತೆ ಮತ್ತು ಸಾಮಾಜಿಕ ನ್ಯಾಯದ ನಡುವಿನ ನಂಟಿನ ಕುರಿತು ಸಮ್ಮೇಳನ ಕೇಂದ್ರೀಕೃತವಾಗಿದ್ದು, ಲಿಂಗ, ವೈಕಲ್ಯತೆ ಮತ್ತು ಸಾಂಸ್ಕೃತಿಕ ವೈವಿಧ್ಯತೆ ವಿಷಯಗಳನ್ನು ಶೈಕ್ಷಣಿಕ ನೆಲಗಟ್ಟಿನಲ್ಲಿ ರೂಪಿಸಲಾಗಿದೆ. ಒಟ್ಟು 500 ಶಿಕ್ಷಕರು ಭಾಗವಹಿಸಲಿದ್ದಾರೆ~ ಎಂದು ಕಾರ್ಯಕ್ರಮ ಸಂಯೋಜಕಿ ಅನುಪಮಾ ಪ್ರಕಾಶ್ ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT