ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿಯಲ್ಲಿ ಸಂಸತ್‌ ಅಧಿವೇಶನ

Last Updated 8 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಏಪ್ರಿಲ್‌–ಮೇನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಲೇಖಾನುದಾನ ಅನುಮೋದನೆಗಾಗಿ ಫೆಬ್ರುವರಿ ಮಧ್ಯಾವಧಿಯಲ್ಲಿ ಲೋಕಸಭೆ ಅಧಿವೇಶನ ನಡೆಯಲಿದೆ.

‘ಸುಮಾರು 10 ಅಥವಾ 15 ದಿನ ಅಧಿವೇಶನ ನಡೆಯಲಿದೆ. ಲೇಖಾನುದಾನದ ಜತೆ ರೈಲ್ವೆ ಲೇಖಾನುದಾನಕ್ಕೂ ಅನುಮೋದನೆ ನೀಡಲಾಗುತ್ತದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್‌ ಹೇಳಿದ್ದಾರೆ. ಹೊಸ ಸರ್ಕಾರ ಪೂರ್ಣ­ಪ್ರಮಾಣದ ಬಜೆಟ್‌ ಮಂಡಿಸಲಿದೆ.

‘ಜನಲೋಕಪಾಲ ಮಸೂದೆ ಅಂಗೀಕಾರಗೊಂಡ ಬಳಿಕ ಯುಪಿಎ ಸರ್ಕಾರವು, ಭ್ರಷ್ಟಾಚಾರ ನಿಗ್ರಹಕ್ಕೆ ಸಂಬಂಧಿಸಿದ ಕೆಲವೊಂದು ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲು ಉದ್ದೇಶಿಸಿದೆ’ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

‘ಲೋಕಸಭೆ ಚುನಾವಣೆ ಹಿನ್ನೆಲೆ­ಯಲ್ಲಿ ಸರ್ಕಾರವು ಈ ಮಹತ್ವದ ಮಸೂದೆಗಳಿಗೆ ಅಂಗೀಕಾರ ನೀಡಲು ಹೊರಟಿದೆ’ ಎನ್ನುವ ಅಭಿಪ್ರಾಯವನ್ನು ಅವರು ತಳ್ಳಿಹಾಕಿದರು.

ಅವ್ಯವಹಾರ ಬಯಲಿಗೆಳೆಯು­ವ­ವರ ರಕ್ಷಣೆ ಮಸೂದೆ, ನ್ಯಾಯಾಂಗ ಉತ್ತರದಾಯಿತ್ವ ಮಸೂದೆ, ಭ್ರಷ್ಟಾಚಾರ ನಿಗ್ರಹ ತಿದ್ದುಪಡಿ ಮಸೂದೆ, ಸಕಾಲ ಸೇವೆ, ನಾಗರಿಕರ ಹಕ್ಕು ಮಸೂದೆ-ಗಳಿಗೆ ಅಂಗೀಕಾರ ದೊರೆಯಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT