ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೈನಲ್‌ನಲ್ಲಿ ಪೇಸ್-ರಾಡೆಕ್‌ಗೆ ಸೋಲು

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಟೋಕಿಯೊ (ಪಿಟಿಐ): ಲಿಯಾಂಡರ್ ಪೇಸ್ ಹಾಗೂ ಜೆಕ್ ಗಣರಾಜ್ಯದ ರಾಡೆಕ್ ಸ್ಟೆಪಾನೆಕ್ ಇಲ್ಲಿ ನಡೆಯುತ್ತಿರುವ ಎಟಿಪಿ ಜಪಾನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ಫೈನಲ್‌ನಲ್ಲಿ ಸೋಲು ಕಂಡಿದ್ದಾರೆ.

ಭಾನುವಾರ ನಡೆದ ಅಂತಿಮ ಘಟ್ಟದ ಪಂದ್ಯದಲ್ಲಿ ಪೇಸ್-ಸ್ಟೆಪಾನೆಕ್ 3-6, 6-7ರಲ್ಲಿ ಅಲೆಕ್ಸಾಂಡರ್ ಪೇಯಾ ಹಾಗೂ ಬ್ರುನೊ ಸೋರ್ಸ್‌ ಎದುರು ಪರಾಭವಗೊಂಡರು.  ಆದರೂ ಪೇಸ್ ಹಾಗೂ ಸ್ಟೆಪಾನೆಕ್ ಮುಂದಿನ ವಾರ ಲಂಡನ್‌ನಲ್ಲಿ ನಡೆಯಲಿರುವ ಎಟಿಪಿ ವರ್ಲ್ಡ್ ಟೂರ್  ಫೈನಲ್ಸ್‌ನಲ್ಲಿ ಆಡಲು ಅರ್ಹತೆ ಪಡೆದುಕೊಂಡಿದ್ದಾರೆ.

ಪೇಸ್ 13ನೇ ಬಾರಿ ಈ ಟೂರ್ನಿಯಲ್ಲಿ ಆಡಲು ಅವಕಾಶ ಪಡೆದುಕೊಂಡಿದ್ದಾರೆ. ಅವರು 1997, 1999, 2000 ಹಾಗೂ 2005ರಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT