ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಕೋರ್ಟ್‌ಗೆ

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಕೋಲ್ಕತ್ತ (ಐಎಎನ್‌ಎಸ್): ಪಂಚಾಯಿತಿ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ನಡುವೆ ಹಲವು ದಿನಗಳಿಂದ ಉಂಟಾಗಿರುವ ಬಿಕ್ಕಟ್ಟು, ಇದೀಗ ಕೋಲ್ಕತ್ತ ಹೈಕೋರ್ಟ್ ಮೆಟ್ಟಿಲು ಹತ್ತಿದೆ.

ರಾಜ್ಯ ಪೊಲೀಸರ ಸುಪರ್ದಿಯಲ್ಲಿ ಇದೇ 26ಹಾಗೂ 30ರಂದು ಎರಡು ಹಂತಗಳಲ್ಲಿ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಮಮತಾ ಬ್ಯಾನರ್ಜಿ ಸರ್ಕಾರ ಮಾ.22ರಂದು ಅಧಿಸೂಚನೆ ಹೊರಡಿಸಿದ್ದು, ,ಇದನ್ನು ರಾಜ್ಯ ಚುನಾವಣಾ ಆಯೋಗ ವಿರೋಧಿಸಿದೆ.

ರಾಜ್ಯ ಸರ್ಕಾರದ ಘೋಷಣೆ ಆಯೋಗದ ಸಲಹೆಗೆ ವಿರುದ್ಧವಾಗಿದ್ದು ವಾಸ್ತವವಾಗಿ ಕೇಂದ್ರದ ಭದ್ರತಾ ಪಡೆಗಳ ಸುಪರ್ದಿಯಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಬೇಕಾಗುತ್ತದೆ. ಹಾಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಕೋರಿ ಆಯೋಗ ಕೋರ್ಟ್‌ಗೆ ಮನವಿ ಸಲ್ಲಿಸಿದೆ.

  ನಿಷ್ಪಕ್ಷಪಾತ ಚುನಾವಣೆ ನಡೆಸಲು ಕೇಂದ್ರ ಭದ್ರತಾ ಪಡೆಗಳ ಸುಪರ್ದಿಯಲ್ಲಿ ಚುನಾವಣೆ ನಡೆಸಬೇಕು ಎಂದು ಚುನಾವಣಾ ಆಯೋಗ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT