ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧಿತ ಕೇಜ್ರಿವಾಲ್, ಕಾರ್ಯಕರ್ತರ ಬಿಡುಗಡೆ

Last Updated 13 ಅಕ್ಟೋಬರ್ 2012, 8:40 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ರಾಜೀನಾಮೆಗೆ ಆಗ್ರಹಿಸಿ  ಶುಕ್ರವಾರ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ, ಅರವಿಂದ ಕೇಜ್ರಿವಾಲ್ ಮತ್ತು ಇತರ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರು ಶನಿವಾರ ಅವರನ್ನು ಇಲ್ಲಿನ ದೆಹಲಿ ಹೊರವಲಯದಲ್ಲಿ ಬಿಡುಗಡೆಗೊಳಿಸಿದರು.

~ಸಲ್ಮಾನ್ ಖುರ್ಷಿದ್ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಿ ಅವರನ್ನು ಬಂಧಿಸುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಸಂಸತ್ ಭವನದ ರಸ್ತೆಯಲ್ಲಿ ಮುಂದುವರೆಸುತ್ತಲೇ ಇರುತ್ತೇವೆ~ ಎಂದು ಅರವಿಂದ ಕೇಜ್ರಿವಾಲ್  ಅವರು ಬಂಧನದಿಂದ ಬಿಡುಗಡೆಗೊಂಡ ನಂತರ ಪ್ರಕಟಿಸಿದರು.

ಆದರೆ, ಸಲ್ಮಾನ್ ಖುರ್ಷಿದ್ ಮತ್ತು ಅವರ ಪತ್ನಿ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆ (ಎನ್‌ಜಿಒ) ಜಾಕೀರ್ ಹುಸೇನ್ ಸ್ಮಾರಕ ಪ್ರತಿಷ್ಠಾನದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬುದಾಗಿ ಕೇಜ್ರಿವಾಲ್ ಅವರು ಮಾಡಿದ ಆರೋಪವನ್ನು ಖುರ್ಷಿದ್ ಮತ್ತು ಅವರ ಪತ್ನಿ ಅಲ್ಲಗಳೆದಿದ್ದಾರೆ.

ಶುಕ್ರವಾರ ಸಂಜೆ ಇಲ್ಲಿನ ರಾಜೀವ ಗಾಂಧಿ ಕ್ರೀಡಾಂಗಣದ ಬಳಿ ಸಚಿವ ಸಲ್ಮಾನ್ ಖುರ್ಷಿದ್ ಅವರ ರಾಜೀನಾಮೆ ಹಾಗೂ ಅವರ ಬಂಧನ ಆಗ್ರಹಿಸಿ ಪ್ರಧಾನಿ ನಿವಾಸದತ್ತ  ಪ್ರತಿಭಟನಾ ಮೆರವಣಿಗೆ ಹೊರಟಿದ್ದ  ಕೇಜ್ರಿವಾಲ್ ಸೇರಿದಂತೆ ಇತರೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇಂದು ಕೇಜ್ರಿವಾಲ್ ಹಾಗೂ ಕೆಲ ಅಂಗವಿಕಲರು ಸೇರಿದಂತೆ ಬಂಧನಕ್ಕೆ ಒಳಗಾಗಿದ್ದ ಇತರೆ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ~ ಎಂದು ಹಿರಿಯ ಪೋಲಿಸರು ತಿಳಿಸಿದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT