ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್ ಹುಕುಂ ಸಕ್ರಮ ವಿಳಂಬ: ಆರೋಪ

Last Updated 10 ಜನವರಿ 2014, 5:10 IST
ಅಕ್ಷರ ಗಾತ್ರ

ನಾಗಮಂಗಲ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸುವಲ್ಲಿ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ  ಎಂದು ಬಿಎಸ್‌ಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಎಂ. ಕೃಷ್ಣಮೂರ್ತಿ ಆರೋಪಿಸಿದರು.

ಅವರು ಗುರುವಾರ ಪಟ್ಟಣದ ಟಿ.ಬಿ. ಬಡಾವಣೆಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂರಹಿತರಿಗೆ ಭೂಮಿ ನೀಡುವಂತೆ ಡಿ. 27ರಿಂದ ಮೂರು ದಿನಗಳು ಬಿಎಸ್‌ಪಿ ಪ್ರತಿಭಟನೆ ನಡೆಸಿತ್ತು.

ಸರ್ಕಾರ ಇನ್ನೂ ಸಮಿತಿ ರಚಿಸದೆ ವಿಳಂಬ ಮಾಡುತ್ತಿದೆ. ಇದನ್ನು ಖಂಡಿಸಿ ಜ.30 ರಂದು  ಪ್ರತಿ ತಾಲ್ಲೂಕು ಕಚೇರಿ ಮುಂದೆ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

28 ಕ್ಷೇತ್ರದಲ್ಲಿ  ಕಣಕ್ಕೆ :  28 ಕ್ಷೇತ್ರಗಳಲ್ಲೂ ಬಿಎಸ್‌ಪಿ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಹೆಚ್.ಎನ್. ನರಸಿಂಹ ಮೂರ್ತಿ, ಉಪಾಧ್ಯಕ್ಷೆ ದೇವೀರಮ್ಮ, ಕಾರ್ಯದರ್ಶಿ ಗದ್ದೆಭೂವನಹಳ್ಳಿ ವರದರಾಜ್, ಸಂಘಟನಾ ಕಾರ್ಯದರ್ಶಿ ಲೋಕೇಶ್, ತಾಲ್ಲೂಕು ಅಧ್ಯಕ್ಷ ಮಹದೇವ್ ಇತರರು  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT