ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ಪೂರ್ವಭಾವಿ ಸಭೆ

Last Updated 1 ಫೆಬ್ರುವರಿ 2011, 6:25 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರಸಭೆಯ 2011-12ನೇ ಸಾಲಿನ ಬಜೆಟ್‌ನಲ್ಲಿ ನಗರದ ಹಸಿರೀಕರಣ ಮತ್ತು ರಸ್ತೆ ಕಾಮಗಾರಿ ಗುಣಮಟ್ಟಕ್ಕೆ ಒತ್ತುಕೊಡಬೇಕು ಎಂದು ವಿವಿಧ ಸಂಘ- ಸಂಸ್ಥೆಗಳು ಅಭಿಪ್ರಾಯ ವ್ಯಕ್ತಪಡಿಸಿದವು.

ನಗರಸಭೆಯಲ್ಲಿ ಸೋಮವಾರ ನಡೆದ ಬಜೆಟ್ ಪೂರ್ವಭಾವಿ ಸಭೆ ಉದ್ದಕ್ಕೂ ವಿವಿಧ ಸಂಘಟನೆಗಳ ಮುಖಂಡರು, ಇಡೀ ನಗರ ದೂಳುಮಯವಾಗಿದೆ. ಹುಡುಕಾಡಿದರೂ ಗಿಡಗಳು ಸಿಗುವುದಿಲ್ಲ. ಉದ್ಯಾನಗಳ ಸಮರ್ಪಕ ನಿರ್ವಹಣೆ ಇಲ್ಲ. ಆದ್ದರಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ನಗರದ ಹಸಿರೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಅಧ್ಯಕ್ಷ ಕೆ.ವಿ. ವಸಂತಕುಮಾರ್ ಮಾತನಾಡಿ, ನಗರದಲ್ಲಿ ಉದ್ಯಾನಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಆದರೆ, ಅವುಗಳ ಅಸಮರ್ಪಕ ನಿರ್ವಹಣೆಯಿಂದ ಅವ್ಯವಸ್ಥೆಯ ಆಗರವಾಗಿವೆ. ಉದ್ಯಾನಗಳ ಅಭಿವೃದ್ಧಿಗೆ ತಲಾ ್ಙ 5 ಲಕ್ಷ ಮೀಸಲಿಡಬೇಕು ಎಂದು ತಿಳಿಸಿದರು.

ಪಾರ್ಕ್‌ಗಳಿಗೆ ತಲಾ 1.49 ಕೋಟಿ: ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಅಧ್ಯಕ್ಷ ಕೆ.ಎಸ್. ಗಂಗಾಧರಪ್ಪ, ಈಗಾಗಲೇ ಗಾಂಧಿಪಾರ್ಕ್ ಅಭಿವೃದ್ಧಿಗೆ ್ಙ 10 ಕೋಟಿ ಮಂಜೂರಾಗಿದೆ. ಅದೇ ರೀತಿ, ನಗರದ ಪ್ರತಿ ವಾರ್ಡ್‌ನಲ್ಲಿ ಇರುವ ಉದ್ಯಾನಗಳನ್ನು ತಲಾ ್ಙ 1.49 ಕೋಟಿ  ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು.

ಇದನ್ನು ಪಾರ್ಕ್‌ಗಳಲ್ಲಿ ಫುಟ್‌ಪಾತ್, ವಿದ್ಯುತ್, ಕಾರಂಜಿ ಸೇರಿದಂತೆ ಸಮರ್ಪಕ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದರು. ಆಯುಕ್ತ ಬಿ. ಜಯಣ್ಣ ಮಾತನಾಡಿ, ಇಷ್ಟೇ ಅಲ್ಲ ಸ್ಥಳಾಂತರಗೊಳ್ಳಲಿರುವ ಜಿಲ್ಲಾ ಕಾರಾಗೃಹದ ಜಾಗದಲ್ಲಿ ಸುಸಜ್ಜಿತ ಪಾರ್ಕ್ ನಿರ್ಮಿಸಲಾಗುವುದು ಎಂದು ತಿಳಿಸಿದರು. ಅಲ್ಲದೇ, ಪ್ರತಿದಿನ ಘನತ್ಯಾಜ್ಯ ನಿರ್ವಹಣೆಗೆ ್ಙ 5 ಕೋಟಿ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ರಸ್ತೆ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದ್ದು, ಈ ನಿಟ್ಟಿನಲ್ಲಿ ಕಾಳಜಿ ವಹಿಸಬೇಕು. ಕಾಮಗಾರಿ ಬಗ್ಗೆ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಟಿ.ಆರ್. ಅಶ್ವತ್ಥ್‌ನಾರಾಯಣ ಮತ್ತು ನಗರಸಭೆ ಮಾಜಿ ಸದಸ್ಯ ಆರ್. ಸತ್ಯನಾರಾಯಣ ಒತ್ತಾಯಿಸಿದರು.

ಅಧ್ಯಕ್ಷರು ಮಾತನಾಡಿ, ವಾರ್ಡ್‌ಗಳ ರಸ್ತೆ ಅಭಿವೃದ್ಧಿ ಸಂಬಂಧ ಮುಖ್ಯಮಂತ್ರಿಗೆ ್ಙ 89 ಕೋಟಿ  ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ಪ್ರತಿ ವಾರ್ಡ್‌ನಲ್ಲಿ ಒಂದು ಕಿ.ಮೀ. ಕಾಂಕ್ರಿಟ್ ಮತ್ತು ಒಂದು ಕಿ.ಮೀ. ಡಾಂಬರ್ ರಸ್ತೆ ನಿರ್ಮಿಸಲಾಗುವುದು ಎಂದು ವಿವರಿಸಿದರು.

ಶಿವಮೊಗ್ಗ ನಂದನ್, ನಗರದಲ್ಲಿನ ಸ್ಮಶಾನಗಳಲ್ಲಿ ವಿದ್ಯುತ್ ದೀಪ ಸೇರಿದಂತೆ ಕನಿಷ್ಠ ಸೌಲಭ್ಯಗಳೂ ಇಲ್ಲ. ಶವಸಂಸ್ಕಾರಕ್ಕೂ ತೊಂದರೆಯಾಗುತ್ತಿದೆ. ಸ್ಮಶಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.  ಸಭೆಯಲ್ಲಿ ಸ್ಥಾಯಿಸಮಿತಿ ಅಧ್ಯಕ್ಷ ಮೋಹನ್ ರೆಡ್ಡಿ, ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT