ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಮಕ್ಕಳ ನೆರವಿಗೆ ತಪಸ್

Last Updated 12 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿಭಾವಂತ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರಾಷ್ಟ್ರೋತ್ಥಾನ ಪರಿಷತ್ ಮತ್ತು ಬೇಸ್ ಸಂಸ್ಥೆ ಜಂಟಿಯಾಗಿ `ತಪಸ್~  ಯೋಜನೆಯನ್ನು ಪ್ರಾರಂಭಿಸುತ್ತಿದೆ.

ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ,  ತಪಸ್ ಯೋಜನೆಯ ಮೂಲಕ ಬಡ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುವುದು. ಸದ್ಯ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ, ವಾರ್ಷಿಕ ಒಂದೂವರೆ ಲಕ್ಷ ಆದಾಯವಿರುವ ಬಡ ಕುಟುಂಬಗಳ ಗಂಡು ಮಕ್ಕಳನ್ನು ಯೋಜನೆಗೆ ಆಯ್ಕೆ ಮಾಡಲಾಗುವುದು. ಫೆಬ್ರುವರಿ 5ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ 30 ರಿಂದ 40 ಮಕ್ಕಳನ್ನು ಆರಿಸಲಾಗವುದು~ ಎಂದರು.

`ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಿಯುಸಿಯ ಜೊತೆಗೆ ಐಐಟಿ ಮತ್ತು ಜೆಇಇ ತರಬೇತಿಗಳನ್ನೂ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಊಟ ಮತ್ತು ವಸತಿ ವ್ಯವಸ್ಥೆ ಸಂಪೂರ್ಣ ಉಚಿತವಾಗಿರುತ್ತದೆ. ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳನ್ನೂ ಯೋಜನೆಯಡಿ ತರಲಾಗುವುದು~ ಎಂದರು.

ಸಂಯೋಜಕರು, ತಪಸ್ ಪ್ರಕಲ್ಪ, ರಾಷ್ಟ್ರೋತ್ಥಾನ ಪರಿಷತ್, ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ: 94812 01144 ಅಥವಾ 94812 40771 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT