ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಮಕ್ಕಳ ಶಿಕ್ಷಣಕ್ಕಾಗಿ ಮೊರಾರ್ಜಿ ಶಾಲೆ

Last Updated 14 ಫೆಬ್ರುವರಿ 2012, 10:35 IST
ಅಕ್ಷರ ಗಾತ್ರ

ಮಡಿಕೇರಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿ ಸಹಿತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು  ಆರಂಭಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಫೆ.25 ರವರೆಗೆ ವಿತರಿಸಲಾಗುವುದು.ಮಾರ್ಚ್ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಸ್ಮರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಮಾಜ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

ಹಿನ್ನೆಲೆ: ಪ್ರಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಗಿರಿಜನ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆಗಳ ಅಡಿಯಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗಿನ ವಸತಿ ಶಾಲೆಗಳನ್ನು ಪ್ರಾರಂಭಿಸಲಾಯಿತು.

ಕಳೆದ ವರ್ಷದಿಂದ ಈ ಎಲ್ಲಾ ವಸತಿ ಶಾಲೆಗಳ ನಿರ್ವಹಣೆಯನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ವಹಿಸಲಾಯಿತು. ಈ ಶಾಲೆಗಳ  ಪ್ರವೇಶ ಪರೀಕ್ಷಾ ಕಾರ್ಯವು ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಮಟ್ಟದ ಪ್ರದೇಶ ಪರೀಕ್ಷಾ ಸಮಿತಿ ನಿರ್ವಹಿಸುತ್ತದೆ.

ಇದೇ ರೀತಿ ಕೇಂದ್ರ ಸರ್ಕಾರದ ಧನಸಹಾಯದೊಂದಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 4ಏಕಲವ್ಯ ವಸತಿ ಶಾಲೆಗಳನ್ನು  ಪ್ರಾರಂಭಿಸಲಾಗಿದೆ. ಈ ವಸತಿ ಶಾಲೆಗಳನ್ನು ರಾಜ್ಯಾದ್ಯಂತ ಒಂದೇ ಮಾದರಿಯಲ್ಲಿ ಏಕಕಾಲದಲ್ಲಿ ಆಯಾ ಜಿಲ್ಲಾ ಮಟ್ಟದಲ್ಲಿ ಪ್ರವೇಶ ಪರೀಕ್ಷೆ ಏರ್ಪಡಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಕಳೆದ ಸಾಲಿನಲ್ಲಿ ನಿರ್ವಹಿಸಿದಂತೆ ಕೌನ್ಸಿಲಿಂಗ್ ಮೂಲಕ ಆಯ್ಕೆ ಕ್ರಮಗಳನ್ನು ಕೈಗೊಳ್ಳಲು ಮಾರ್ಗದರ್ಶನ ನೀಡಲಾಗಿದೆ.

ಇದೇ ರೀತಿ 7, 8, ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಸಹ ಮಾರ್ಗಸೂಚಿಗಳನ್ನು ನೀಡಲಾಗಿದೆ.

ವೈಶಿಷ್ಟ್ಯತೆಗಳು: ಪ.ಜಾತಿ, ಪ.ವರ್ಗ, ಹಿಂ.ವರ್ಗ ಮತ್ತು ಅಲ್ಪಸಂಖ್ಯಾತ ವರ್ಗದ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅವಕಾಶ.

6ನೇ ತರಗತಿಯಿಂದ 10ನೇ ತರಗತಿಯವರೆಗೆ ವಸತಿಸಹಿತ ಉಚಿತ ವಿದ್ಯಾಭ್ಯಾಸ. ಪ್ರತಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳಿಗೆ ಪ್ರವೇಶ ಹಾಗೂ ವಿದ್ಯಾರ್ಥಿಗಳ ಆದ್ಯತೆಯ ಮೆರಿಟ್ ಮತ್ತು ರೋಸ್ಟರ್ ಪದ್ದತಿ ಆಧರಿಸಿ ಗಣಕೀಕೃತ ವಿಧಾನದಲ್ಲಿ ಪ್ರವೇಶಾವಕಾಶ. ಪ್ರತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತರಗತಿಯಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸೀಟುಗಳು ಮೀಸಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT