ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಮಕ್ಕಳಿಗೆ ನೋಟ್‌ ಪುಸ್ತಕ ವಿತರಣೆ

Last Updated 5 ಜನವರಿ 2014, 20:04 IST
ಅಕ್ಷರ ಗಾತ್ರ

ನೆಲಮಂಗಲ: ಖಾಸಗಿ ಕಾಲೇಜನ್ನೂ ನಾಚಿಸುವ ಎಲ್ಲ ಸೌಲಭ್ಯಗಳನ್ನು ತ್ಯಾಮ­ಗೊಂಡ್ಲು ಕಾಲೇಜಿಗೆ ಕಲ್ಪಿಸಲಾಗಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿ­ಕೊಳ್ಳಬೇಕು ಎಂದು ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ತಿಳಿಸಿದರು.

ತಾಲ್ಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ­ಗಳಿಗೆ ನೋಟ್‌ ಪುಸ್ತಕ ವಿತ­ರಣೆ ಮತ್ತು ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಂಗಸ್ವಾಮಿ ನೋಟ್‌ ಪುಸ್ತಕ ವಿತರಿಸಿದರು. ಗ್ರಾ.ಪಂ ಅಧ್ಯಕ್ಷ ಜಗ­ದೀಶ್‌ ಪ್ರತಿಭಾ ಪುರಸ್ಕಾರ ನೀಡಿದರು.

ಗ್ರಾಮದ ಪ್ರಮುಖ ಮಹಿಮಣ್ಣ ಕಾಲೇಜಿನ ಶ್ರೇಯಸ್ಸಿಗಾಗಿ ಶ್ರಮಿಸಿದ ಅಧ್ಯಾಪಕರನ್ನು ಸನ್ಮಾನಿಸಿದರು. ಡೈರಿ ಅಧ್ಯಕ್ಷ ಜಯರಾಮ್‌, ನಿವೃತ್ತ ಪ್ರಾಂಶು­ಪಾಲ ನಾಗರಾಜು, ಕಾಲೇಜು ಅಭಿ­ವೃದ್ಧಿ ಸಮಿತಿ ಸದಸ್ಯರಾದ ನಾಗರಾಜು, ಹೊನ್ನಮ್ಮ , ಜಯಂತಿ, ಸಿದ್ದಯ್ಯ, ಮಂಜು­­ನಾಥ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT