ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರಿಗಾಗಿ ಅಟಲ್ ಸಾರಿಗೆ

Last Updated 12 ಸೆಪ್ಟೆಂಬರ್ 2011, 19:35 IST
ಅಕ್ಷರ ಗಾತ್ರ

ಬೆಂಗಳೂರು: `ಬಿಎಂಟಿಸಿಯು ನಾಗರಿಕರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ `ಅಟಲ್ ಸಾರಿಗೆ~ ಬಸ್ಸುಗಳ ಸೇವೆಯನ್ನು ಕಲ್ಪಿಸುತ್ತಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಸಚಿವ ಆರ್.ಅಶೋಕ ಹೇಳಿದರು.

ಬಿಎಂಟಿಸಿಯು ಹೊಸಕೆರೆಹಳ್ಳಿ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಅಟಲ್ ಸಾರಿಗೆ~ ಬಸ್ಸುಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟ ಮತ್ತು ಅಂಗವಿಕಲರಿಗೆ ರಿಯಾಯಿತಿ ದರದಲ್ಲಿ ಪಾಸು ನೀಡುತ್ತಿರುವಂತೆ ಬಡವರ ಅನುಕೂಲಕ್ಕಾಗಿ ಈ ಸೇವೆಯನ್ನು ಒದಗಿಸಲಾಗುತ್ತಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆ ನಷ್ಟ ಅನುಭವಿಸಿದರೂ ಕೂಡ ಇಂತಹ ಬಸ್ಸುಗಳ ಸೇವೆಗೆ ಚಾಲನೆ ನೀಡಲಾಗುತ್ತಿದೆ~ ಎಂದು ಹೇಳಿದರು.

`ಮಾನ್ಯತಾ ಪತ್ರ ಪಡೆದಿರುವ ಪತ್ರಕರ್ತರನ್ನು ಹೊರತುಪಡಿಸಿ 400 ಮಂದಿ ಪತ್ರಕರ್ತರಿಗೆ ರಿಯಾಯಿತಿ ದರದ ಬಸ್ ಪಾಸುಗಳನ್ನು ನೀಡುವ ಯೋಜನೆಯಿದ್ದು, ಈ ಬಗ್ಗೆ ಸಂಸ್ಥೆಯ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ~ ಎಂದು ಭರವಸೆ ನೀಡಿದರು.

ನಗರದಾದ್ಯಂತ ಈಗಾಗಲೇ 30  `ಅಟಲ್ ಸಾರಿಗೆ~ ಬಸ್ಸುಗಳು ಸೇವೆ ನೀಡುತ್ತಿದ್ದು, ಇದಕ್ಕೆ ಈ ಎರಡು ಬಸ್ಸುಗಳು ಸೇರ್ಪಡೆಗೊಳ್ಳಲಿವೆ. ಕೃಷ್ಣರಾಜೇಂದ್ರ ಮಾರುಕಟ್ಟೆಯಿಂದ ಪದ್ಮನಾಭನಗರ ಮತ್ತು ಹೊಸಕೆರೆಹಳ್ಳಿಗೆ ಈ ಬಸ್ಸುಗಳು ಸೇವೆ ಕಲ್ಪಿಸಲಿವೆ.

ಕುಮಾರಸ್ವಾಮಿ ಹೇಳಿಕೆಗೆ ಖಂಡನೆ
ಹೊಸಕೆರೆಹಳ್ಳಿಯ ಬಸ್ ನಿಲ್ದಾಣದಲ್ಲಿ `ಅಟಲ್ ಸಾರಿಗೆ~ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ, `ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ದಿನಗೂಲಿ ನೌಕರ ಎಂಬ ಸಂಸದ ಎಚ್. ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.

`ಒಂದು ಪಕ್ಷದ ಉನ್ನತ ಸ್ಥಾನದಲ್ಲಿರುವ ಕುಮಾರಸ್ವಾಮಿ ಇಂತಹ ಹೇಳಿಕ್ನೆ ನೀಡಬಾರದು. ಇದು ಅವರಿಗೆ ಶೋಭೆ ತರುವಂತದ್ದಲ್ಲ~ ಎಂದು ಪ್ರತಿಕ್ರಿಯಿಸಿದರು.

`ರಾಜ್ಯದ ಜನತೆ ಕಳಂಕರಹಿತ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರನ್ನು ಒಪ್ಪಿಕೊಂಡಿದ್ದಾರೆ. ಅವರ ಚಿಂತನಾಶೀಲ ಕಾರ್ಯವೈಖರಿಯಿಂದ ಒಂದು ತಿಂಗಳಿನಲ್ಲೇ ಜನ ಮನ್ನಣೆ ಗಳಿಸುತ್ತಿದ್ದಾರೆ. ಈ ಬಗ್ಗೆ ಅನಗತ್ಯ ಹೇಳಿಕೆ ನೀಡುವುದು ಸರಿಯಲ್ಲ~ ಎಂದರು.

`ಕೊಪ್ಪಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪ್ರಚಾರ ಕೈಗೊಳ್ಳಲು ಪ್ರವಾಸ ಕೈಗೊಳ್ಳಲಿದ್ದೇನೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನಮ್ಮದು. ಅಂತೆಯೇ ಬಿಜೆಪಿ ಪಕ್ಷದಲ್ಲಿ ಒಗ್ಗಟ್ಟಿದೆ~ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT