ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಲಾಗದ ಜೀವನಮಟ್ಟ: ವಿಷಾದ

Last Updated 14 ಅಕ್ಟೋಬರ್ 2011, 7:00 IST
ಅಕ್ಷರ ಗಾತ್ರ

ಕಾರವಾರ: ಐತಿಹಾಸಿಕ  ನೆಲೆಗಟ್ಟು ಬಿಟ್ಟು ಆಧು ನಿಕ ಯುಗದಲ್ಲಿ ಬದುಕುತ್ತಿದ್ದರೂ ಮನುಷ್ಯನ ಜೀವನಮಟ್ಟದಲ್ಲಿ ನಿರೀಕ್ಷಿತ ಬದಲಾವಣೆಗಳಾಗಿಲ್ಲ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ ವಿಷಾದಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಾರ್ವಜನಿಕ ಅಹವಾಲು ಮತ್ತು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳಿಂದ ವಂಚಿತವಾಗಿರುವ ಸಮುದಾಯ ರಾಷ್ಟ್ರದಾದ್ಯಂತ ಇನ್ನೂ ಇದೆ ಎಂದರು.

ಲಕ್ಷಾಂತರ ಜನರು ಇವತ್ತೂ ಸೂರಿಲ್ಲದೆ ಬದುಕುತ್ತಿದ್ದಾರೆ. ಪೌಷ್ಠಿಕಾಂಶದ ಕೊರತೆಯಿಂದ ಕೋಟ್ಯಂತರ ಜನರು ಬಳಲುತ್ತಿದ್ದಾರೆ. ಶುದ್ಧ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ಹೀಗೆ ಸಮಾಜದ ಅನೇಕ ಸ್ತರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ತಿಳಿಸಿದರು.

ಕೆಳಮಟ್ಟದ ಅಧಿಕಾರಿಗಳು ಯಾವ್ಯಾವುದೋ ಆಮಿಷಕ್ಕೊಳಗಾಗುವುದರಿಂದ ಅರ್ಹರಿಗೆ ಸೌಲ ಭ್ಯಗಳು ಅನರ್ಹರಿಗೆ ಸಿಗುತ್ತಿವೆ. ಹಿರಿಯ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕೆಳಮಟ್ಟದ ಅಧಿಕಾರಿಗಳ ಮೇಲೆ ಕ್ರಮಕೈಗೊಂಡು ಸೌಲಭ್ಯಗಳು ಸರಿಯಾಗಿ ತಲುಪುವಂತೆ ಮಾಡಬೇಕು ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ  ಒಟ್ಟು ಮೂರು ಲಕ್ಷ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಅನರ್ಹರು ಈ ಕಾರ್ಡ್‌ಗಳನ್ನು ಪಡೆದಿರುವುದರಿಂದ ಅರ್ಹರಿಗೆ ಅನ್ಯಾಯವಾಗಿದೆ ಎಂದು ನಾಯಕ ಅವರ ನುಡಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳು ಒದಗಿಸಬೇಕು ಎಂದು ಅವರು ನುಡಿದರು.

ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಬಂದರು ಇಲಾಖೆ ನಿರ್ದೇಶಕ ಕ್ಯಾಪ್ಟನ್ ಮೋಹನ್ ರಾಜಘಾಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಗುಡಿಮನಿ, ಡಿವೈಎಸ್‌ಪಿ ನಾಗರಾಜ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT