ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲು ಸೀಮೆ ರೈತರಿಗೆ ನೆರವು: ಮುನಿಯಪ್ಪ

Last Updated 3 ಅಕ್ಟೋಬರ್ 2012, 5:55 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು: `ದೇಶದ ಸುಮಾರು ನಾಲ್ಕು ಕೋಟಿ ರೈತರಿಗೆ ರೂ. 72ಸಾವಿರ ಕೋಟಿ ಸಾಲಮನ್ನಾ ಮಾಡಿರುವ ಕೇಂದ್ರ ಸರ್ಕಾರ, ಈಗ ಬಯಲು ಸೀಮೆಯ ಅತಿದೊಡ್ಡ ಹಿಡುವಳಿದಾರರ ನೆರವಿಗೆ ಧಾವಿಸಲು ಚಿಂತನೆ ನಡೆಸಿದೆ~ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.

ಹೊಸಕಾದರವಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ `ಕಾಂಗ್ರೆಸ್‌ನೊಂದಿಗೆ ಬನ್ನಿ; ಬದಲಾವಣೆ ತನ್ನಿ~ ಎಂಬ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

`ಕೇಂದ್ರ ಕೊಟ್ಟಿರುವ ವಿವಿಧ ಕಾರ್ಯ ಕ್ರಮಗಳನ್ನು ಜನತೆಗೆ ತಿಳಿಸುವ ಕೆಲಸ ಆಗಬೇಕಿದೆ~ ಎಂದು ಅಭಿಪ್ರಾಯ ಪಟ್ಟರು. `ರಾಜ್ಯದಲ್ಲಿ 30 ಹೊಸ ರೈಲ್ವೆ ಮಾರ್ಗಗಳ ಸಮೀಕ್ಷೆಗೆ ಆದೇಶ ಮಾಡಲಾಗಿದೆ. 16 ಹೊಸ ರೈಲ್ವೆ ಯೋಜನೆಗಳನ್ನು ರೂಪಿಸಲಾಗಿದೆ. ಅದರಲ್ಲಿ ಧಾರವಾಡ -ಬೆಳಗಾವಿ ನಗರಕ್ಕೆ ನೇರ ಮಾರ್ಗದ ಯೋಜನೆಯೂ ಸೇರಿದೆ~ ಎಂದು ಅವರು ವಿವರಿಸಿದರು.

`ಮೀರಜ್-ಯಶವಂತಪುರ ಮಾರ್ಗವಾಗಿ ಸಂಚರಿಸುವ ರೈಲ್ವೆಯನ್ನು ಮಂಗಳವಾರದಿಂದ ಪ್ರಾರಂಭಿಸಲಾಗಿದೆ~ ಎಂದು ನುಡಿದ ಅವರು, `ಕೇಂದ್ರ ಮಂತ್ರಿಗಳಾದ ಎಸ್. ಎಂ. ಕೃಷ್ಣ, ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ರಾಜ್ಯದಲ್ಲಿಯ ನಾಲ್ಕು ವಿಭಾಗಗಳನ್ನು ಹಂಚಿಕೊಂಡು ಅಲ್ಲಿಯ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ~ ಎಂದರು.

ಮಾಜಿ ಸಚಿವ ಡಿ. ಬಿ. ಇನಾಂದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಎ. ಕೃಷ್ಣಪ್ಪ, ಎಚ್. ಎಂ. ರೇವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್, ರಾಣಿ ಶುಗರ್ಸ್‌ ಉಪಾಧ್ಯಕ್ಷ ರಾಜೇಂದ್ರ ಅಂಕಲಗಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT