ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ನಿರ್ವಹಣೆ ಲೋಪವಾದರೆ ಗಂಭೀರ ಕ್ರಮ

Last Updated 18 ಜುಲೈ 2012, 8:20 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬರ ಪರಿಹಾರ ಕಾರ್ಯದಲ್ಲಿ ಅಧಿಕಾರಿಗಳು ನಿರಂತರವಾಗಿ ಕಾರ್ಯ ನಿರ್ವಹಿಸಬೇಕು. ಇದರಲ್ಲಿ ಯಾವುದೇ ಲೋಪವಾದರೆ ಗಂಭೀರವಾಗಿ ಪರಿಗಣಿಸ ಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್.ಜೀವರಾಜ್ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳ ವಾರ ಬರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಕಡೆಗಳಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು. ನಿಯಮ, ತಾಂತ್ರಿಕ ಸಮಸ್ಯೆ ಮುಂದಿಟ್ಟು ವಿಳಂಬ ಮಾಡಿದರೆ ಸಹಿಸಲಾಗದು. ಅಲ್ಲದೆ, ಬರ ಕಾಮ ಗಾರಿಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ಕಂಡುಬಂದರೆ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಕಡೂರು ಮತ್ತು ತರೀಕೆರೆ ತಾಲ್ಲೂಕುಗಳೆರಡನ್ನೂ ಬರ ಪೀಡಿತವೆಂದು ಪರಿಗಣಿಸುವ ಅಗತ್ಯ ಕಂಡುಬಂದಿದೆ. ಬರ ಸಮಸ್ಯೆ ಸೇರಿದಂತೆ ಜಿಲ್ಲೆಯ ಎಲ್ಲ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸೇರಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಾಗುವುದು. ಬರುವ ಭಾನುವಾರ ದಿಂ ದಲೇ ತಾಲ್ಲೂಕುಗಳಲ್ಲಿ ಬರ ಪರಿಶೀಲನೆಗೆ ಪ್ರವಾಸ ಕೈಗೊಳ್ಳಲಾಗುವುದು ಎಂದು ಹೇಳಿದರು.

 ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಗ್ರಾಮಸಭೆಗಳಿಗೆ ಎಲ್ಲ ಅಧಿಕಾರಿಗಳು ಕಡ್ಡಾಯ ವಾಗಿ ಹಾಜರಾಗಬೇಕು. ಈ ಬಗ್ಗೆ ಗಮನಹ ರಿಸುವಂತೆ ಸಚಿವರು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಮಲ್ಲಂದೂರಿನಲ್ಲಿ ಗ್ರಾ.ಪಂ. ಅಧ್ಯಕ್ಷರ ವಿರುದ್ಧದ ಪ್ರಕರಣ ಸಂಬಂಧ, ನ್ಯಾಯಯುತವಾಗಿ ಕ್ರಮ ಕೈಗೊಂಡು ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಜೀವರಾಜ್, ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.
 ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಮಾತನಾಡಿ, ಕಡೂರು ಹೊರತುಪಡಿಸಿ ಜಿಲ್ಲೆಯ ಇತರ ತಾಲ್ಲೂಕುಗಳಿಗೆ ಬರ ಪರಿಹಾರ ಕಾಮಗಾರಿಗಳಿಗೆ ವಿಶೇಷ ಅನುದಾನ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಜತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

  ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ವಿಳಂಬವಿಲ್ಲದೆ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಚಿಕ್ಕಮಗಳೂರಿನ ನರಗನಹಳ್ಳಿ ಮತ್ತು ಇಂದಾವರ ಗ್ರಾಮಗಳ ನಿವೇಶನ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಡಿ.ಎಸ್.ಸುರೇಶ್, ಡಾ.ವೈ.ಸಿ.ವಿಶ್ವನಾಥ್, ಗಾಯತ್ರಿ ಶಾಂತೇಗೌಡ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಸಭೆಯಲ್ಲಿ ಪ್ರಸ್ತಾಸಿದರು. ಜಿ.ಪಂ.ಅಧ್ಯಕ್ಷೆ ಸುಚಿತಾ ನರೇಂದ್ರ, ಉಪಾಧ್ಯಕ್ಷ ಆನಂದಪ್ಪ, ನಗರಸಭೆ ಅಧ್ಯಕ್ಷ ಪ್ರೇಮ್‌ಕುಮಾರ್, ಜಿ.ಪಂ. ಸದಸ್ಯೆ ರೇಖಾ ಹುಲಿಯಪ್ಪಗೌಡ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. 

 ಜಿಲ್ಲಾಧಿಕಾರಿ ಡಿ.ಕೆ.ರಂಗಸ್ವಾಮಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಜಿಲ್ಲೆಯಲ್ಲಿನ ಬರ ಪರಿಹಾರ ಕಾಮಗಾರಿಗಳ ವಿವರ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT