ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಗಾಲ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

Last Updated 2 ಸೆಪ್ಟೆಂಬರ್ 2013, 6:04 IST
ಅಕ್ಷರ ಗಾತ್ರ

ಅರಸೀಕೆರೆ: ತೀವ್ರ ಬರದಿಂದ ತತ್ತರಿಸುತ್ತಿರುವ ಅರಸೀಕೆರೆ ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಎ.ಎಸ್. ಬಸವರಾಜು ಈಚೆಗೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ಎರಡೂ ತಾಲ್ಲೂಕುಗಳಲ್ಲಿ ಮಳೆಯ ತೀವ್ರ ಅಭಾವದ ಕಾರಣ ರೈತರು ಬೆಳೆ ಯಿಲ್ಲದ ಪರಿತಪಿಸುತ್ತಿದ್ದರೂ ಈ ಎರಡು ಕ್ಷೇತ್ರಗಳ ಜೆಡಿಎಸ್ ಶಾಸಕರು ಬರಪೀಡಿತ ಪಟ್ಟಿಯಿಂದ ಹೆಸರುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದರೂ ಚಕಾರ ಎತ್ತ ದಿರುವುದು ಶೋಚನೀಯ ಸಂಗತಿ ಎಂದರು.

ಜಿಲ್ಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿರುವ ಕೆಲವು ತಾಲ್ಲೂಕು ಗಳನ್ನು ಬರಪೀಡಿತ ಪಟ್ಟಿಯಲ್ಲಿ ಸೇರಿರುವುದಕ್ಕೆ ಮಾಜಿ ಸಚಿವ    ಎಚ್. ಡಿ.ರೇವಣ್ಣ ಅವರ ಒತ್ತಡ ಕಾರಣ ಎಂದು ಮಾಜಿ ಶಾಸಕ ದೂರಿದರು.

ಶಾಸಕರ ವೈಫಲ್ಯ:  ತಾಲ್ಲೂಕಿನಾದ್ಯಂತ ಕೆರೆ, ಕಟ್ಟೆಗಳಲ್ಲಿ ನೀರಿಲ್ಲದೇ ದನಕರುಗಳು ಮೇವು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತರ್ಜಲ ಮಟ್ಟ ಕುಸಿದಿರುವ ಕಾರಣ ಕೊಳವೆ ಬಾವಿಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಸುಮಾರು ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ತೆಂಗಿನಮರಗಳು ಸುಳಿ ಬಿದ್ದು ಹೋಗಿ ರೈತರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಆದರೂ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಸರ್ಕಾರದ ಮೇಲೆ ಒತ್ತಡ ತಂದು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಸಾಧ್ಯವಾಗಿಲ್ಲ. ತೆಂಗಿನ ಮರಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂಸದರಾ ಗಿದ್ದು, ಐವರು ಶಾಸಕರಿದ್ದರೂ ಬರಪರಿಸ್ಥಿತಿಯಿಂದ ತೀವ್ರ ತೊಂದರೆ ಗೊಳಗಾಗಿರುವ ರೈತರಿಗೆ ಪರಿ ಹಾರ ಒದಗಿಸುವಲ್ಲಿ ವಿಫಲರಾ ಗಿದ್ದಾರೆ. ತಾವು ಈ ಹಿಂದೆ ಶಾಸಕರಾಗಿದ್ದ ಸಂದರ್ಭದಲ್ಲಿ ಅಂದಿನ ಕಂದಾಯ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರ ಮೇಲೆ ಒತ್ತಡ ತಂದು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿಸಿ ಸಾಕಷ್ಟು ಬರ ಪರಿಹಾರ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.

ಅಂತೆಯೇ ಶಾಸಕರು ಬಿಜೆಪಿ ಸರ್ಕಾರದಲ್ಲಿ ವಿಧಾನಸಭೆ ಒಳಗೂ, ಹೊರಗೂ ಅನೇಕ ಹೋರಾಟ ಮಾಡಿ ಸಾಕಷ್ಟು ಅನುದಾನ ತಂದಿದ್ದಾರೆ. ಅದೇ ಕಾರಣ ಎರಡನೇ ಬಾರಿಗೆ ಬಾರಿ ಬಹು ಮತಗಳನ್ನು ಪಡೆದು ಆಯ್ಕೆಯಾಗುವ ಮೂಲಕ ಕ್ಷೇತ್ರದ ರಾಜಕಾರಣದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಆದರೂ ಈ ಬಾರಿ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಏಕೆ ಘೋಷಣೆ ಮಾಡಿಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ತಾವು ಶಾಸಕರಾಗಿದ್ದ ಅವಧಿಯಲ್ಲಿ ಕಾರ್ಯರೂಪಕ್ಕೆ ತಂದ ಮೊರಾರ್ಜಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಪ್ರಥಮ ದರ್ಜೆ ಕಾಲೇಜು, ಹೊನವಳ್ಳಿ ಏತ ನೀರಾವರಿ, ಯಗಚಿ ಕುಡಿಯುವ ನೀರು ಯೋಜನೆ ಸೇರಿದಂತೆ ಅನೇಕ ಯೋಜನೆಗಳು ಇವರ ಅವಧಿಯಲ್ಲಿ ಚಾಲನೆ ನೀಡಲಾಗಿತ್ತು. ಹೀಗಾಗಿ ಜನರ ವಿಶ್ವಾಸಗಳಿಸಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.ಇವರ ಅವಧಿಯಲ್ಲಿ ಕ್ಷೇತ್ರಕ್ಕೆ ಕೈಗಾರಿಕೆಗಳನ್ನು ತಂದು ಸಾವಿರಾರು ಜನರಿಗೆ ಉದ್ಯೋಗ ದೊರಕಿಸಬೇಕು  ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಎನ್.ಸಿ.ಗೋವಿಂದರಾಜು, ಎಚ್,ಎನ್, ನಂಜೇಗೌಡ, ಎ.ಸಿ.ಶಂಕರಯ್ಯ, ಎ.ಎಲ್.ನಾರಾಯಣ್, ನಾಗೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT