ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬಳ್ಳಾರಿ ಮತ್ತೆ ಕಾಂಗ್ರೆಸ್ ಭದ್ರಕೋಟೆ'

Last Updated 4 ಡಿಸೆಂಬರ್ 2012, 5:38 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ : ರೆಡ್ಡಿಗಳ ಪ್ರಾಬಲ್ಯವಿರುವ ಬಳ್ಳಾರಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲು ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಬಳ್ಳಾರಿ ಜಿಲ್ಲೆ ಮತ್ತೆ ಕಾಂಗ್ರೆಸ್ ಭದ್ರಕೋಟೆ ಯಾಗಲಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಮಾಜಿ ಸಚಿವ ಮಲ್ಲಿ ಕಾರ್ಜುನ ನಾಗಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಚಿಂತ್ರಪಳ್ಳಿ ಗ್ರಾಮ ಸಮೀಪದ ಸಂಸದ ಅನಿಲ್‌ಲಾಡ್ ಅವರ ತೋಟದ ಮನೆಯಲ್ಲಿ ಸೋಮ ವಾರ ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಗತ್ಯ ಪ್ರಚಾರದ ಹಿನ್ನಲೆಯಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳ ಮತದಾರ ರನ್ನು ಭೇಟಿ ಮಾಡಲು ಅಭ್ಯರ್ಥಿಗಳಿಗೆ ಅನುಕೂಲ ಮಾಡಿ ಕೊಡುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭೆಯ ಚುನಾವಣೆಗೂ ಒಂದು ತಿಂಗಳು ಮುಂಚಿತವಾಗಿ ರಾಜ್ಯದ ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದ ಎಲ್ಲಾ 224 ಕ್ಷೇತ್ರಗಳ ಸೂಕ್ತ ಅಭ್ಯರ್ಥಿಯ ಆಯ್ಕೆ ಮತ್ತು ಟಿಕೇಟ್ ನೀಡುವ ಪ್ರಕ್ರಿಯೆ ಸಂಬಂಧಿಸಿದಂತೆ ಸಮರೋಪಾದಿ ಯಲ್ಲಿ ಅವಲೋಕನ ನಡೆಸಲಾಗಿದ್ದು, ಶೀಘ್ರದಲ್ಲಿ ಕೆಪಿಸಿಸಿಗೆ ವಿಸ್ತ್ರತ ವರದಿ ನೀಡಲಾಗುತ್ತದೆ ಎಂದು ಹೇಳಿದರು.

ಕ್ಷೇತ್ರ ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸಲು ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೂ ಎಲ್ಲ ಹಂತದ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಲು ಕೋರಿದರು.

ಮುಖಂಡ ರಾರಾಳುತಾಂಡಾ ಕೃಷ್ಣಾನಾಯ್ಕ, ಕಳೆದ ಬಾರಿ ಪರಾಭವ ಗೊಂಡಿರುವ ಹೆಗ್ಡಾಳು ರಾಮಣ್ಣ, ಕೆಪಿಸಿಸಿ ಸದಸ್ಯರಾದ ಕೃಷ್ಣಾನಾಯ್ಕ, ಪಿ.ಎಚ್.ದೊಡ್ಡರಾಮಣ್ಣ, ಪೋಲೀಸ್ ರಾಮಾನಾಯ್ಕ, ಕಮಲಾಪುರ ಎಸ್‌ಸಿ ಘಟಕದ ಅಧ್ಯಕ್ಷ ಎಲ್.ಸೋಮ್ಲೋ ನಾಯ್ಕ, ಸಿ.ಬಸವರಾಜ, ಎಲ್. ಬಾಲಾಜಿ ನಾಯ್ಕ ಹಾಗೂ ಎಚ್. ಸತ್ಯನಾರಾಯಣ ಸಹಿತ 19  ಆಕಾಂಕ್ಷಿ ಗಳು ತಮ್ಮ ಬೆಂಬಲಿಗರೊಂದಿಗೆ ಬಂದು ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿದರು. ಕೆಪಿಸಿಸಿ ವೀಕ್ಷಕರಾದ ಮಾಜಿ ಶಾಸಕರಾದ ಎಚ್.ಆಂಜನೇಯ ಮತ್ತು ಕೆ.ರಾಜಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT