ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣೆಪ್ಪಾ ಕಂಬಾರಗೆ ಒಲಿದ: ಛಂದ ಪುಸ್ತಕ ಬಹುಮಾನ

Last Updated 10 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕತೆಗಾರ ಬಸವಣ್ಣೆಪ್ಪಾ ಕಂಬಾರ ಅವರ ಕಥಾಸಂಕಲನದ ಹಸ್ತಪ್ರತಿಗೆ ಈ ಸಾಲಿನ `ಛಂದ ಪುಸ್ತಕ~ ಬಹುಮಾನ ಲಭಿಸಿದೆ. ಬೆಳಗಾವಿ ಜಿಲ್ಲೆಯ ಘೋಡಗೇರಿಯವರಾದ ಕಂಬಾರರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪಠ್ಯಪುಸ್ತಕ ಸಹ ಮೇಲ್ವಿಚಾರಕರಾಗಿದ್ದಾರೆ.

`ಛಂದ ಪುಸ್ತಕ~ವು ಈ ಪುಸ್ತಕವನ್ನು ಪ್ರಕಟಿಸಿ, ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ನೀಡುತ್ತದೆ. ಮಾರ್ಚ್ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಈ ಸ್ಪರ್ಧೆಗೆ ಸುಮಾರು 61 ಹಸ್ತಪ್ರತಿಗಳು ಬಂದಿದ್ದವು. ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ತೀರ್ಪುಗಾರರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT