ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಗುಡಿ ಕ್ಷೇತ್ರಕ್ಕೆ ಕೆಂಗಲ್ ಮೊಮ್ಮಗ ಶ್ರೀಪಾದ ಪೈಪೋಟಿ

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ನಗರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಬಸವನಗುಡಿ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದ ರೇಣು ಅವರೂ ಪೈಪೋಟಿ ನಡೆಸಿದ್ದಾರೆ.

ಬಸವನಗುಡಿ ಕ್ಷೇತ್ರದಲ್ಲಿ ಒಕ್ಕಲಿಗರು ಗಣನೀಯ ಸಂಖ್ಯೆಯಲ್ಲಿರುವ ಕಾರಣ ರೇಣು ಅವರ ಹೆಸರು ಕೂಡ ಪರಿಶೀಲನೆಯಲ್ಲಿ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್, ಪಾಲಿಕೆ ಸದಸ್ಯ ಕೆ.ಚಂದ್ರಶೇಖರ್ ಅವರ ಹೆಸರುಗಳು ಕೂಡ ಶಿಫಾರಸು ಆಗಿವೆ.

ಪದ್ಮನಾಭನಗರ ಕ್ಷೇತ್ರದಲ್ಲಿ ಈ ಹಿಂದೆ ಸೋತಿದ್ದ ಗುರಪ್ಪ ನಾಯ್ಡು ಜತೆಗೆ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರ ಪುತ್ರ ಚೇತನ್ ಗೌಡ ಅವರೂ ಪ್ರಬಲ ಆಕಾಂಕ್ಷಿ. ಕೆ.ಆರ್.ಪುರ ಕ್ಷೇತ್ರದಿಂದ ಮಾಜಿ ಸಚಿವ ಎ.ಕೃಷ್ಣಪ್ಪ ಹಾಗೂ ದಾಸರಹಳ್ಳಿ ಕ್ಷೇತ್ರದಿಂದ ಮತ್ತೊಬ್ಬ ಮಾಜಿ ಸಚಿವ ಬಿ.ಎಲ್.ಶಂಕರ್ ಟಿಕೆಟ್‌ಗೆ ಬಿರುಸಿನ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT