ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಪ್ರಯಾಣ ದರ ಹೆಚ್ಚಳ: ರಸ್ತೆ ತಡೆ

Last Updated 2 ಅಕ್ಟೋಬರ್ 2012, 4:35 IST
ಅಕ್ಷರ ಗಾತ್ರ

ಮೈಸೂರು: ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ನಗರ ಬಸ್ ನಿಲ್ದಾಣದ ಮುಂದೆ ಸೋಮವಾರ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.

ಏಕಾಏಕಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರು ವುದು ಖಂಡನೀಯ. ಕೂಡಲೇ ಪ್ರಯಾಣ ದರವನ್ನು ಇಳಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ನಗರ ಬಸ್ ನಿಲ್ದಾಣದ ಮುಂಭಾಗದ ಸಯ್ಯಾಜಿರಾವ್ ರಸ್ತೆಯಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಸುಮಾರು 45 ನಿಮಿಷಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ವಾಹನ ಸವಾರರು ಮುಂದೆ ಹೋಗಲಾಗದೆ ಪರದಾಡಿದರು.

ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಾಗ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ವಶಕ್ಕೆ ಪಡೆದಿದ್ದ ವಿದ್ಯಾರ್ಥಿಯನ್ನು ಬಿಡಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT