ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾ ಚುನಾವಣೆ: 12 ಸಾವು

Last Updated 5 ಜನವರಿ 2014, 11:33 IST
ಅಕ್ಷರ ಗಾತ್ರ

ಢಾಕಾ (ಪಿಟಿಐ): ವಿರೋಧ ಪಕ್ಷಗಳ ವಿರೋಧದ ನಡುವೆ  ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಭಾನುವಾರ ಆರಂಭವಾಗಿದ್ದು ಈ ವೇಳೆ ನಡೆದ ಹಿಂಸಾಚಾರದಲ್ಲಿ 12 ಜನರು ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಗೆ 300 ಕ್ಷೇತ್ರಗಳ ಪೈಕಿ 147 ಕ್ಷೇತ್ರಗಳಲ್ಲಿ ಮತದಾನ ಆರಂಭವಾಯಿತು. ಚುನಾವಣೆ ವಿರೋಧಿಸಿ ವಿರೋಧ ಪಕ್ಷಗಳು ಮತ್ತು ಆಡಳಿತರೂಢ ಪಕ್ಷದ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 12 ಜನರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು  ಮಂದಿ ಗಾಯಗೊಂಡಿದ್ದಾರೆ ಎಂದು ಬಾಂಗ್ಲಾ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಷನಲ್‌ ಪಾರ್ಟಿ ಸೇರಿದಂತೆ ಇತರೆ 18 ರಾಜಕೀಯ ಪಕ್ಷಗಳು ಈ ಚುನಾವಣೆಯನ್ನು ಬಹಿಷ್ಕರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT