ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್ ಸ್ಫೋಟ: ಸಚಿವರು ಪಾರು

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕೈರೊ (ಪಿಟಿಐ): ಈಜಿಪ್ಟ್‌ನ ಒಳಾಡಳಿತ ಸಚಿವ ಮೊಹಮದ್ ಇಬ್ರಾಹಿಂ ಅವರು ಬೆಂಗಾವಲಿನಲ್ಲಿ ವಾಹನದಲ್ಲಿ ಸಾಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಬಾಂಬ್ ಎಸೆದಿದ್ದರಿಂದ ಮಗುವೊಂದು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಸಚಿವರು ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ.

ನಸರ್ ನಗರ ಜಿಲ್ಲೆಯ ಸಚಿವರ ನಿವಾಸ ಬಳಿಯೇ ಈ ಘಟನೆ ನಡೆದಿದೆ. ಕಾರಿನಲ್ಲಿ ಬಾಂಬ್ ಇಟ್ಟು ಸ್ಫೋಟಿಸಲಾಗಿದೆ ಎಂದು ಮೊದಲು ವರದಿಯಾಗಿತ್ತು. ಹತ್ತಿರದ ಕಟ್ಟಡದಿಂದ ಬಾಂಬ್‌ನ್ನು ಎಸೆಯಲಾಗಿದೆ ಎಂದು ನಂತರ ಖಚಿತಪಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT