ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕ್ಸಿಂಗ್: ಸೆಮಿಫೈನಲ್‌ಗೆ ಸುರೇಂದರ್ ಸಿಂಗ್

Last Updated 10 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಉತ್ತಮ ಪ್ರದರ್ಶನ ಮುಂದುವರಿಸಿರುವ ಭಾರತದ ಸುರೇಂದರ್ ಸಿಂಗ್ ಕಾಮನ್‌ವೆ  ಲ್ತ್ ಯೂತ್ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯ 75 ಕೆ.ಜಿ. ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಈ ಮೂಲಕ ಭಾರತಕ್ಕೆ ಪದಕವನ್ನು ಖಚಿತಪಡಿಸಿದ್ದಾರೆ. 17 ವರ್ಷದ ಸುರೀಂದರ್ ಶನಿವಾರ ನಡೆದ ಸ್ಪರ್ಧೆಯಲ್ಲಿ 21:15 ಪಾಯಿಂಟ್‌ಗಳಲ್ಲಿ ನಾಥನ್ ತಾರ್ಲೆ ಅವರನ್ನು ಮಣಿಸಿದರು.

ಸೆಮಿಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಗ್ರಾಂಟ್ ಕೈಗ್ಲೇಯಿ ಅವರ ಸವಾಲನ್ನು ಎದುರಿಸಲಿದ್ದಾರೆ.
ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತದ ರಾಹುಲ್ ಪೂನಿಯಾ ಸಹ ಪದಕವನ್ನು ಖಚಿತ ಪಡಿಸಿಕೊಂಡಿದ್ದಾರೆ. ಸುರೀಂದರ್ ಯೂತ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT