ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ ಜಿಲ್ಲೆ: ಎರಡು ನಾಮಪತ್ರ ತಿರಸ್ಕೃತ

Last Updated 19 ಏಪ್ರಿಲ್ 2013, 10:30 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರದಲ್ಲಿ ಸಲ್ಲಿಕೆಯಾದ 123 ನಾಮಪತ್ರಗಳ ಪರಿಶೀಲನೆ ಗುರುವಾರ ನಡೆಯಿತು. ಬೀಳಗಿ ಮತಕ್ಷೇತ್ರದಲ್ಲಿ ಬಿ.ಜೆ.ಪಿಯ ಪರ್ಯಾಯ ಅಭ್ಯರ್ಥಿಯಾಗಿದ್ದ ಹನುಮಂತ ನಿರಾಣಿ ಅವರು ಸಲ್ಲಿಸಿದ್ದ ಎರಡೂ ನಾಮಪತ್ರಗಳು ತಿರಸ್ಕೃತ ಗೊಂಡಿವೆ.

ಉಳಿದ 77 ಅಭ್ಯರ್ಥಿಗಳ 121 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಅಬಕಾರಿ ಅಧಿಕಾರಿಗಳ ದೂರವಾಣಿ ಸಂಖ್ಯೆ

ಬಾಗಲಕೋಟೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಸರಾಯಿ ಸಂಗ್ರಹಣೆ, ಮಾರಾಟ, ತಯಾರಿಕೆ ಮಾಡಿದ ಬಗ್ಗೆ ಸಾರ್ವಜನಿಕರಿಗೆ ಕಂಡುಬಂದಲ್ಲಿ ಕೂಡಲೇ ಪೊಲೀಸ್ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಬಾಗಲಕೋಟೆ, ಬೀಳಗಿ, ಜಮಖಂಡಿ ತಾಲ್ಲೂಕಿಗೆ ಸಂಬಂಧಪಟ್ಟಂತೆ ಮೊಬೈಲ್ ಸಂಖ್ಯೆ 9449845035, ಬಾದಾಮಿ, ಹುನಗುಂದ, ಮುಧೋಳ ತಾಲ್ಲೂಕಿಗೆ ಸಂಬಂಧಪಟ್ಟಂತೆ ಮೊ- 9449845049 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೇಳೆ ಬದಲಾವಣೆ
ಬಾಗಲಕೋಟೆ: ಜಿಲ್ಲಾ ಪಂಚಾಯ್ತಿ ಹಾಗೂ ಪಂಚಾಯತ್ ರಾಜ್ (ಎಂಜಿನಿಯರ್) ಇಲಾಖೆ ಹೊರತು ಪಡಿಸಿ ಉಳಿದ ಇಲಾಖೆಗಳು ಸರ್ಕಾರಿ ಆದೇಶದನ್ವಯ ಏಪ್ರಿಲ್ ಮತ್ತು ಮೇನಲ್ಲಿ ಬೆಳಿಗ್ಗೆ 8 ರಿಂದ ಮದ್ಯಾಹ್ನ 1.30 ರವರೆಗೆ ಕಾರ್ಯನಿರ್ವಹಿಸಲು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜಿ.ಪಾಟೀಲ ತಿಳಿ ಸಿದ್ದಾರೆ.

ಜಿಲ್ಲಾಧಿಕಾರಿಗಳು ಬರಗಾಲ ಮತ್ತು ಚುನಾವಣಾ ಪ್ರಕ್ರಿಯೆ ಇರುವು ದರಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಗಳಿಗೆ ಸದರಿ ವೇಳೆ ಅನ್ವಯಿಸುವುದಿಲ್ಲ ಎಂದು ಸೂಚಿಸಿದ್ದರು.

ಜಿಲ್ಲಾ ಪಂಚಾಯತ ರಾಜ್ (ಎಂ) ಇಲಾಖೆ ಹೊರತು ಪಡಿಸಿ ಉಳಿದ ಇಲಾಖೆಗಳು ಸರ್ಕಾರಿ ಆದೇಶದಂತೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರ ವರೆಗೆ ಕಾರ್ಯನಿರ್ವಹಿಸಲು ಸೂಚಿ ಸಿದ್ದಾರೆ ಎಂದು ಸಿಇಒ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT