ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬರಿ ಮಸೀದಿ ಧ್ವಂಸ: ವಿವಿಧೆಡೆ ವಿಜಯೋತ್ಸವ

Last Updated 7 ಡಿಸೆಂಬರ್ 2012, 6:47 IST
ಅಕ್ಷರ ಗಾತ್ರ

ಮಡಿಕೇರಿ: ಬಾಬರಿ ಮಸೀದಿ ಧ್ವಂಸ ಮಾಡಿ 20 ವರ್ಷ ಕಳೆದ ಹಿನ್ನೆಲೆಯಲ್ಲಿ ವಿಶ್ವ ಹಿಂದು ಪರಿಷತ್, ಬಜಜರಂಗದಳ, ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.

ನಗರದ ಪೇಟೆ ಶ್ರೀ ರಾಮ ಮಂದಿರ ದೇವಾಲಯದಲ್ಲಿ ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಪೂಜೆ ಸಲ್ಲಿಸಿ, ಸಂಭ್ರಮದ ಪ್ರತೀಕವಾಗಿ ಪಟಾಕಿ ಸಿಡಿಸಿದರು.

ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಬಾಬರಿ ಮಸೀದಿಯನ್ನು 1992ರ ಡಿ.6 ರಂದು ಹಿಂದೂ ಪರ ಕಾರ್ಯಕರ್ತರು ಕೆಡವಿ ಹಾಕಿದ್ದರು. ಈಗ ಇದೆ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.  

ಮೆರವಣಿಗೆಯಲ್ಲಿ ವಿಶ್ವ ಹಿಂದೂ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಚಿ.ನಾ. ಸೋಮೇಶ್, ಪದಾಧಿಕಾರಿ ಧನಂಜಯ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಯ್, ಬಜರಂಗದಳದ ಸಂಚಾಲಕ ಚೇತನ್, ನಗರಾಧ್ಯಕ್ಷ ಗಣೇಶ್, ಬಿಜೆಪಿಯ ಮುಖಂಡರಾದ ಸುನೀಲ್ ಸುಬ್ರಮಣಿ, ಎಂ.ಬಿ. ದೇವಯ್ಯ, ನಗರಸಭೆ ಸದಸ್ಯರಾದ ಉನ್ನಿಕೃಷ್ಣ, ಸತೀಶ್ ಪೈ, ಅರುಣ್ ಕುಮಾರ್, ಮೂಡಾ ಅಧ್ಯಕ್ಷ ಸಜೀಲ್ ಕೃಷ್ಣ, ಶ್ರೀ ಓಂಕಾರೇಶ್ವರ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೊಳ್ಳ ಹಾಗೂ ಇತರರು ಭಾಗವಹಿಸಿದ್ದರು.

ಗೋಣಿಕೊಪ್ಪಲು: ವಿಜಯೋತ್ಸವ
ಗೋಣಿಕೊಪ್ಪಲು: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆಡವಿದ ನೆನಪಿಗಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.

ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸರ ಸಂಚಾಲಕ ಜೀವನ್ ಅವರ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಕಾರ್ಯ ಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ರಾಮಮಂದಿರವನ್ನು ಆದಷ್ಟು ಬೇಗನೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಹಿಂದೂ ಜಾಗರಣ ವೇದಿಕೆಯ ತ್ಲ್ಲಾಲೂಕು ಸುಬ್ರಮಣಿ, ಆರ್‌ಎಸ್‌ಎಸ್ ಜಿಲ್ಲಾ ಸೇವಾ ಮುಖಂಡ ಚೆಕ್ಕೆರ ಮನು, ಬಿಜೆಪಿ ಮುಖಂಡರಾದ ಗಿರೀಶ್ ಗಣಪತಿ, ಸಿ.ಕೆ. ಬೋಪಣ್ಣ, ಕೊಲ್ಲಿರ ಧರ್ಮಜ ಇದ್ದರು.

ಹಿಂದೂ ಜಾಗರಣ ವೇದಿಕೆ ಸಂಭ್ರಮ
ಸೋಮವಾರಪೇಟೆ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿ 20 ವರ್ಷ ಸಂದ ಪ್ರಯುಕ್ತ ಪಟ್ಟಣದಲ್ಲಿ ಗುರುವಾರ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಹಿಂದು ಜಾಗರಣ ವೇದಿಕೆ ವತಿಯಿಂದ ವಿದ್ಯಾ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಟ್ಟಪ್ಪ ವೃತ್ತದಲ್ಲಿ ಸೇರಿ ಮೃತಪಟ್ಟ ಕರ ಸೇವಕರ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು. ನಂತರ ಪಟಾಕಿ ಸಿಡಿಸಿ ನೆರೆದಿದ್ದವರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಕ ಸುಭಾಷ್ ತಿಮ್ಮಯ್ಯ, ತಾಲ್ಲೂಕು ಸಂಚಾಲಕ ರಮೇಶ್, ಪ್ರಮುಖರಾದ ಜಿ.ಎ. ಉದಯ, ಟಿ.ಕೆ. ರಮೇಶ್, ಮಾದಪ್ಪ. ಎಸ್.ಆರ್. ಸೋಮೇಶ್, ರವಿಚಂದ್ರ, ರಾಘವ, ರತ್ನ ಕುಮಾರ್, ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT