ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾ ಬಂಧನ ವಿರೋಧಿಸಿ ಪ್ರತಿಭಟನೆ

Last Updated 6 ಜೂನ್ 2011, 5:50 IST
ಅಕ್ಷರ ಗಾತ್ರ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆ, ಕಪ್ಪುಹಣ ವಾಪಸ್‌ಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹಕ್ಕೆ ತೊಡಗಿದ್ದ ಯೋಗಗುರು ಬಾಬಾ ರಾಮ್‌ದೇವ್ ಅವರ ಬಂಧನ ಖಂಡಿಸಿ ನಗರದಲ್ಲಿ ಭಾನುವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಈಗಾಗಲೇ (ಜೂನ್ 4) ಭಾರತ್ ಸ್ವಾಭಿಮಾನ್ ಟ್ರಸ್ಟ್ ವತಿಯಿಂದ ಪಾಲಿಕೆ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಎಲ್ಲ ಪ್ರತಿಭಟನಾಕಾರರು ಧರಣಿನಿರತರಿಗೆ ಬೆಂಬಲ ಸೂಚಿಸಿದರು.

ಶ್ರೀರಾಮ ಸೇನೆ
ನಗರದ ರಾಮ್ ಆ್ಯಂಡ್ ಕೋ ವೃತ್ತದಲ್ಲಿ ಸೇರಿದ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಕಾರ್ಯಕರ್ತರು ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎವಿಕೆ ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿದರು. ಇದೇ ಸಂದರ್ಭ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸೇನೆಯ ಜಿಲ್ಲಾ ಘಟಕದ ಮುಖಂಡರಾದ ಪರಶುರಾಮ ನಡುಮನಿ, ಮಣಿಕಂಠ, ಕಿರಣ್, ಸಂದೀಪ್, ಆನಂದಜ್ಯೋತಿ, ಬಸವರಾಜ್ ಇತರರು ಭಾಗವಹಿಸಿದ್ದರು.

ಹಿಂದೂ ಜಾಗರಣಾ ವೇದಿಕೆ
ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಪಾಲಿಕೆ ಮುಂಭಾಗದಿಂದ ಮೆರವಣಿಗೆ ಹೊರಟು, ಗಾಂಧಿವೃತ್ತದಲ್ಲಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದೇಶದ ್ಙ 400 ಲಕ್ಷ ಕೋಟಿ ಕಪ್ಪು ಹಣ ವಾಪಸ್‌ಗೆ ಆಗ್ರಹಿಸಿ ಸತ್ಯಾಗ್ರಹಕ್ಕೆ ಮುಂದಾಗಿದ್ದ ಬಾಬಾ ರಾಮ್‌ದೇವ್ ಅವರ ಬಂಧನ ಖಂಡನೀಯ ಎಂದು ಹೇಳಿದರು. ಬಳಿಕ ಕಾಂಗ್ರೆಸ್ ಧ್ವಜ ಸುಟ್ಟುಹಾಕಲಾಯಿತು.

ವೇದಿಕೆಯ ವಿಭಾಗೀಯ ಸಂಚಾಲಕ ಎಸ್.ಟಿ. ವೀರೇಶ್, ಜಿಲ್ಲಾ ಸಹ ಸಂಚಾಲಕ ರಮೇಶ್, ಮೃತ್ಯುಂಜಯ, ಬಸವರಾಜ್, ಮಂಜು, ಪ್ರಶಾಂತ್, ಉಮೇಶ್ ಕತ್ತಿ ಇದ್ದರು.

ಕರವೇ
ಗಾಂಧಿವೃತ್ತದಲ್ಲಿ ಸೇರಿದ ಕರ್ನಾಟಕ ರಕ್ಷಣಾ ವೇದಿಕೆಯ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಕೇಂದ್ರ ಸರ್ಕಾರದ ಪ್ರತಿಕೃತಿ ದಹನ ಮಾಡಿದರು. ಬಾಬಾ ಅವರ ಬಂಧನ ಅಕ್ರಮವಾದದ್ದು. ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ. ಯಲ್ಲಪ್ಪ, ಡಿ.ಎಲ್. ಜಯರಾಜ ನಾಯ್ಕ, ಹೋಟೆಲ್ ಗಣೇಶ್, ಆರ್.ಎನ್. ಮೇಘರಾಜ್, ಸೈಯದ್ ನೌಷಾದ್, ರವಿಕುಮಾರ್, ಐ. ಲಕ್ಕಪ್ಪ, ಬಿ.ವಿ. ತಿಪ್ಪೇಸ್ವಾಮಿ, ರಾಜು, ರಾಘವೇಂದ್ರ, ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT