ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾ ರಾಮ್‌ದೇವ್ ಬಂಧನ: ಪ್ರತಿಭಟನೆ

Last Updated 9 ಜೂನ್ 2011, 9:05 IST
ಅಕ್ಷರ ಗಾತ್ರ

ಚನ್ನಗಿರಿ: ಯೋಗಗುರು ರಾಮ್‌ದೇವ್ ಬಂಧನವನ್ನು ವಿರೋಧಿಸಿ ಹಾಗೂ ಅಣ್ಣಾ ಹಜಾರೆಯವರ ಸತ್ಯಾಗ್ರಹವನ್ನು ಬೆಂಬಲಿಸಿ ತುಮ್ಕೊಸ್, ತಾಲ್ಲೂಕು ರೈತ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು.

ಯೋಗ ಗುರು ರಾಮ್‌ದೇವ್ ಅವರು ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾರತದ ಭ್ರಷ್ಟಾಚಾರಿಗಳ ಕಪ್ಪು ಹಣವನ್ನು ಭಾರತಕ್ಕೆ ಹಿಂದಕ್ಕೆ ತರಬೇಕೆಂದು ನಡೆಸುತ್ತಿದ್ದ ಶಾಂತಿಯುತ ಉಪವಾಸ ಸತ್ಯಾಗ್ರಹದ ವೇಳೆ ರಾತ್ರಿಯ ಹೊತ್ತು ಪೊಲೀಸರು ಬಾಬಾ, ಮಹಿಳೆಯರು, ಮಕ್ಕಳು, ವಯೋವೃದ್ಧರ ಮೇಲೆ ಏಕಾಏಕಿ ದಾಳಿ ನಡೆಸಿ ಅಮಾಯಕರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಬಾಬಾ ಅವರನ್ನು ಸತ್ಯಾಗ್ರಹ ಸ್ಥಳವನ್ನು ತೆರವುಗೊಳಿಸುವಂತೆ ಮಾಡಿದ ಕ್ರಮ ಖಂಡನಾರ್ಹವಾಗಿದೆ. ದೆಹಲಿ ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿದ್ದು, ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ದೌರ್ಜನ್ಯ ನಡೆಸಿದಂತಾಗಿದೆ. ಭ್ರಷ್ಟಾಚಾರದ ಮೂಲಕ ಗಳಿಸಿ ವಿದೇಶಿ ಬ್ಯಾಂಕುಗಳಲ್ಲಿ ಇಟ್ಟಿರುವ ಕಪ್ಪು ಹಣ ವಾಪಾಸ್ ದೇಶಕ್ಕೆ ತರಬೇಕು.

ಭ್ರಷ್ಟಾಚಾರವನ್ನು ಹೋಗಲಾಡಿಸಲು ಅಣ್ಣಾ ಹಜಾರೆಯವರು ಕೈಗೊಳ್ಳುವ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮ್ಕೊಸ್ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ತಿಳಿಸಿದರು.

ತುಮ್ಕೊಸ್ ಆವರಣದಿಂದ ಗುರುಬಸವ ಸ್ವಾಮೀಜಿ ನೇತೃತ್ವದಲ್ಲಿ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಹಾದು ಬಂದು ತಹಶೀಲ್ದಾರ್ ಕಚೇರಿಗೆ ತೆರಳಿ ಶಿರಸ್ತೇದಾರ್ ಗಿರೀಶ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತುಮ್ಕೊಸ್ ಮಾಜಿ ಅಧ್ಯಕ್ಷ ಆರ್.ಎಂ. ರವಿ, ನಿರ್ದೇಶಕ ಎಚ್.ಎಸ್. ಮಲ್ಲಿಕಾರ್ಜುನಪ್ಪ, ಎಪಿಎಂಸಿ ಅಧ್ಯಕ್ಷ ಎಂ.ಎನ್. ಮರುಳಪ್ಪ, ಉಪಾಧ್ಯಕ್ಷ ಎನ್. ಗಂಗಾಧರಪ್ಪ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸಿ.ಆರ್. ತಿಪ್ಪೇಶಪ್ಪ, ಸುಣಿಗೆರೆ ಪರಮೇಶ್ವರಪ್ಪ, ದಿಗ್ಗೇನಹಳ್ಳಿ ನಾಗರಾಜ್, ಹನುಮಂತಪ್ಪ, ಬಿಲ್ಲಹಳ್ಳಿ ಚಂದ್ರಪ್ಪ, ದೋಣಿಹಳ್ಳಿ ರಾಜಪ್ಪ ಮುಂತಾದವರು ಪ್ರತಿಭಟನೆಯಲ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT