ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಬಾಬಾ ಸಾಹೇಬ್ ಅಂಬೇಡ್ಕರ್ ಆಶಯ ಸಾಕಾರಗೊಳ್ಳಲಿ'

Last Updated 15 ಏಪ್ರಿಲ್ 2013, 9:59 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ಭೀಮ್‌ರಾವ್ ಹೆಬ್ಬಾಗಿಲಿನಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ರಂಗವಾಹಿನಿ ಅಧ್ಯಕ್ಷ ಸಿ.ಎಂ. ನರಸಿಂಹಮೂರ್ತಿ ಮಾತನಾಡಿ, ಅಂಬೇಡ್ಕರ್ ಎಲ್ಲ ನೋವು ಸಹಿಸಿಕೊಂಡು ಶೋಷಿತರ ಅಭಿವೃದ್ಧಿಗೆ ಶ್ರಮಿಸಿದರು. ಅವರು ಮಹಾನ್ ಮೇಧಾವಿಯಾಗಿದ್ದರು. ಅಧಿಕಾರ ಹಾಗೂ ಪದವಿಗೆ ಆಸೆ ಪಡಲಿಲ್ಲ ಎಂದರು.

ಶೋಷಿತ ಸಮುದಾಯ ಅಭಿವೃದ್ಧಿಯಾಗಬೇಕು. ಅವರು ಜಾಗೃತರಾಗಿ ಹಕ್ಕುಗಳನ್ನು ಪಡೆದುಕೊಂಡಾಗ ಮಾತ್ರ ಸಂವಿಧಾನಕ್ಕೆ ಅರ್ಥ ಬರುತ್ತದೆ ಎಂದು ಹೇಳಿದ್ದರು. ಅವರ ಆಶಯದಂತೆ ಶೋಷಿತರು ಶಿಕ್ಷಣ ಪಡೆದು ದೇಶದಲ್ಲಿ ಅಧಿಕಾರದ ಚುಕ್ಕಾಣಿ  ಹಿಡಿಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಯುವಜನ ಸಂಘದ ಅಧ್ಯಕ್ಷ ಉಮೇಶ್ ಕುದರ್, ಉಪನ್ಯಾಸಕ ಮೂಡ್ನಾಕೂಡು ವಿಶ್ವ, ದಸಂಸ ಜಿಲ್ಲಾ ಸಂಯೋಜಕ ಕೆ.ಎಂ. ನಾಗರಾಜು, ಸಿ.ಕೆ. ರಂಗಸ್ವಾಮಿ, ಶಿಕ್ಷಕ ಮಹದೇವಸ್ವಾಮಿ ಹಾಜರಿದ್ದರು.

ದೇಶಕ್ಕೆ ಅಂಬೇಡ್ಕರ್ ಕೊಡುಗೆ ಸ್ಮರಣೀಯ
ಚಾಮರಾಜನಗರ: `ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟು ದೇಶಕ್ಕೆ ಸುಭದ್ರವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ' ಎಂದು ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಹೇಳಿದರು.

ನಗರದ ರಥದ ಬೀದಿಯಲ್ಲಿರುವ ಕರ್ನಾಟಕ ಜನತಾ ಪಕ್ಷದ ನಗರ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಅಂಬೇಡ್ಕರ್ ಅವರ 122ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸುವಲ್ಲಿ ಅಂಬೇಡ್ಕರ್ ಕೊಡುಗೆ ಹೆಚ್ಚಿದೆ. ದೇಶದಲ್ಲಿ ತಾಂಡವವಾಡುತ್ತಿದ್ದ ಬಡತನ, ಜಾತಿಯತೆ ಹೋಗಲಾಡಿಸಲು ಅವರು ಪಣತೊಟ್ಟಿದ್ದರು. ಅವರ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಹೇಳಿದರು.
ಮುಖಂಡರಾದ ಎನ್. ರಾಜಗೋಪಾಲ್, ಪು. ಶ್ರೀನಿವಾಸನಾಯಕ, ಗೋವಿಂದಶೆಟ್ಟಿ, ಮೋಹನ್‌ಕುಮಾರ್, ಗಣೇಶ್ ದೀಕ್ಷಿತ್ ಹಾಜರಿದ್ದರು.

`ಸಂವಿಧಾನದ ಆಶಯ ಎಲ್ಲರಿಗೂ ತಲುಪಲಿ'
ಯಳಂದೂರು: `ಶ್ರೇಷ್ಠ ಸಂವಿಧಾನದ ಮೂಲಕ ಎಲ್ಲ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಸಿಗುವಂತೆ ಮಾಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಆದರ್ಶಗಳು ಎಲ್ಲರಿಗೂ ಮಾದರಿಯಾಗಬೇಕು' ಎಂದು ಮುಖಂಡ ಯರಗಂಬಳ್ಳಿ ಶಿವಣ್ಣ ತಿಳಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಹಶೀಲ್ದಾರ್ ಶಿವರಾಮು, ತಹಶೀಲ್ದಾರ್ (ಗ್ರೇಡ್-2) ಚಂದ್ರಪ್ಪ, ನಂಜಯ್ಯ, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಮಂಜುನಾಥ್, ಸಿಪಿಐ ಕೀರ್ತಿಕುಮಾರ್, ಪಿಎಸ್‌ಐ ಜಿ.ಆರ್. ನಟರಾಜು, ಬಾಲಸುಂದರ್, ರಾಚಪ್ಪ, ಅಂಬೇಡ್ಕರ್‌ಸೇವಾ ಸಮಿತಿ ಅಧ್ಯಕ್ಷ ರೇವಣ್ಣ, ಚಕ್ರವರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಜರಿದ್ದರು.

ವಿವಿಧೆಡೆ ಜಯಂತಿ ಆಚರಣೆ: ತಾಲ್ಲೂಕಿನ ಗುಂಬಳ್ಳಿ, ಯರಗಂಬಳ್ಳಿ, ಗೌಡಹಳ್ಳಿ, ಅಗರ-ಮಾಂಬಳ್ಳಿ, ಹೊನ್ನೂರು, ಕೆಸ್ತೂರು, ಅಂಬಳೆ, ದುಗ್ಗಹಟ್ಟಿ, ಯರಿಯೂರು, ಮದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 122ನೇ ಜಯಂತಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಪಟ್ಟಣದ ಸರ್ಕಾರಿ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕಚೇರಿ ಸೇರಿದಂತೆ ಎ್ಲ್ಲಲ ಕಡೆಯಲ್ಲೂ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಸೇವಾಸಮಿತಿ ವತಿಯಿಂದ ಜಯಂತಿ ಕಾರ್ಯಕ್ರಮ ನಡೆಯಿತು.

`ಅಂಬೇಡ್ಕರ್ ತತ್ವ ಪಾಲಿಸಿ'
ಕೊಳ್ಳೇಗಾಲ: `ಅಂಬೇಡ್ಕರ್ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುಲು ಮುಂದಾಗಬೇಕು' ಎಂದು ಉಪವಿಭಾಗಾಧಿಕಾರಿ ಎಚ್.ಎನ್.ಸತೀಶ್‌ಬಾಬು ತಿಳಿಸಿದರು.

ಪಟ್ಟಣದ ಗುರುಭವನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್‌ರವರ 122ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತೆಯ ತತ್ವಗಳನ್ನು ಎತ್ತಿಹಿಡಿಯವ ಹಿನ್ನೆಲೆಯಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹೇಳಿದರು.

ಸರ್ಕಾರಿ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಜಿ.ಮಹಾದೇವ ಅವರು ಡಾ.ಬಿ.ಆರ್. ಅಂಬೇಡ್ಕರ್‌ರವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ತಹಶೀಲ್ದಾರ್ ಮಾಳಿಗಯ್ಯ, ಎಂ.ನಂಜುಂಡಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಮಹಾದೇವಮ್ಮ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವಸ್ವಾಮಿ, ಉಜನಿಸಿದ್ದಪ್ಪ, ತೋಟಗಾರಿಕೆ ಇಲಾಖೆ ಶಶಿಧರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಮು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್, ನಗರಸಭೆ ಪೌರಾಯುಕ್ತ ಬಸವರಾಜು, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್, ಪಟ್ಟಣ ಅಂಬೇಡ್ಕರ್ ಸಂಘದ ಅಧ್ಯಕ್ಷ ನಟರಾಜು, ಪುಟ್ಟಬುದ್ಧಿ, ರಾಜಶೇಖರಮೂರ್ತಿ, ನಾಗರಾಜು, ಸಿದ್ದಾರ್ಥ ಇತರರು ಇದ್ದರು.

`ಒಂದು ವರ್ಗಕ್ಕೆ ಅಂಬೇಡ್ಕರ್ ಸೀಮಿತವಾಗದಿರಲಿ'
ಕೊಳ್ಳೇಗಾಲ: `ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎ್ಲ್ಲಲ ವರ್ಗಗಳ ನಾಯಕ. ಅವರನ್ನು ಒಂದೇ ಜನಾಂಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ' ಎಂದು ಸಂಸದ ಆರ್.ಧ್ರುವನಾರಾಯಣ ತಿಳಿಸಿದರು. ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಮುಖಂಡರ ಪಕ್ಷ ಸೇರ್ಪಡೆ ಮತ್ತು ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ
ಸಂತೇಮರಹಳ್ಳಿ: ಇಲ್ಲಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 122 ನೇ ಜಯಂತಿಯನ್ನು ಭಾನುವಾರ ಆಚರಿಸಲಾಯಿತು. ಮುಖ್ಯಶಿಕ್ಷಕ ಶಂಕರಲಿಂಗಯ್ಯ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಡಿಎಡ್ ಕಾಲೇಜು ಉಪನ್ಯಾಸಕ ಪ್ರಸನ್ನ ಪ್ರೌಢಶಾಲಾ ಮುಖ್ಯಶಿಕ್ಷಕ ಸುರೇಶ್, ಕೃಷ್ಣಮೂರ್ತಿ, ನಾಗಸುಂದರ್, ದೀಪಿಕಾ, ಪುಷ್ಬಲತಾ, ಅನಿತಾ ಹಾಜರಿದ್ದರು.

ಗಿಲ್‌ಫ್ರೆಡ್‌ಶಾಲೆ: ಇಲ್ಲಿನ ಗಿಲ್‌ಫ್ರೆಡ್ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 122ನೇ ಜಯಂತಿಯನ್ನು ಭಾನುವಾರ ಆಚರಿಸಲಾಯಿತು. ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿದರು. ಮುಖ್ಯಶಿಕ್ಷಕ ಅಜೀಂಸಾಬ್, ಸಹಶಿಕ್ಷಕರಾದ ಅನಿತಾ, ಸುಜಾತ, ಸುಧಾ, ಆಶಾ, ಶ್ವೇತಾ, ಶೀಲಾ ಹಾಜರಿದ್ದರು. 
   
`ಅಂಬೇಡ್ಕರ್ ಆದರ್ಶ ಅನುಕರಣೀಯ'
ಚಾಮರಾಜನಗರ: ನಗರದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ ನಡೆಯಿತು. ಚಾಮರಾಜನಗರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, `ಪ್ರತಿಯೊಬ್ಬರು ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಪಾಲಿಸಬೇಕು' ಎಂದು ಸಲಹೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ರವಿಕುಮಾರ್, ಕಾಂಗ್ರೆಸ್ ಎಸ್‌ಸಿ ವಿಭಾಗದ ಜಿಲ್ಲಾ ಅಧ್ಯಕ್ಷ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವಣ್ಣ, ಸದಸ್ಯ ಮಹಾಲಿಂಗಸ್ವಾಮಿ, ರತ್ನಮ್ಮ, ಮಹೇಶ್, ಜಯಸಿಂಹ, ನಾಗಯ್ಯ, ಪುಟ್ಟಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT