ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬು ಜಗಜೀವನರಾಮ್ ಜನ್ಮದಿನಾಚರಣೆ

Last Updated 6 ಏಪ್ರಿಲ್ 2013, 5:24 IST
ಅಕ್ಷರ ಗಾತ್ರ

ಬಳ್ಳಾರಿ: ಹಸಿರು ಕ್ರಾಂತಿಯ ಹರಿಕಾರ  ಮಾಜಿ ಉಪ    ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 106ನೇ ಜನ್ಮದಿನವನ್ನು ನಗರದ ಜೋಳದರಾಶಿ ಡಾ. ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಜಿ.ಪಂ. ಸಿಇಓ ಎಂ. ಮಂಜುನಾಥ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ಅವರು ಡಾ.ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಪೌರಾಯುಕ್ತ  ಡಿ.ಎಲ್. ನಾರಾಯಣ, ಜಿ.ಪಂ. ಉಪಕಾರ್ಯದರ್ಶಿ ರವಿ ಬಿಸರಳ್ಳಿ, ಮುಖ್ಯ ಲೆಕ್ಕಾಧಿಕಾರಿ ಚೆನ್ನಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಪೋಲಯ್ಯ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗಾಂವ್‌ಕರ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ  ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೋರನೂರು ಕೊಟ್ರಪ್ಪ ಸ್ವಾಗತಿಸಿದರು.  ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎನ್. ರಾಜಪ್ಪ ವಂದಿಸಿದರು.  ಕಲಾವಿದ ಯಲ್ಲಪ್ಪ ಭಂಡಾರಿ ನಾಡಗೀತೆ ಮತ್ತು ಕ್ರಾಂತಿಗೀತೆ ಪ್ರಸ್ತುತಪಡಿಸಿದರು.

ಹೊಸಪೇಟೆ ವರದಿ
ಡಾ. ಬಾಬು ಜಗಜೀವನರಾಮ್‌ರ ಜನ್ಮದಿನವನ್ನು ಹೊಸಪೇಟೆಯಲ್ಲಿ ತಾಲ್ಲೂಕು ಆಡಳಿತ, ಡಾ. ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆ ಹಾಗೂ ಕಮಲಾಪುರ ಹೋಬಳಿ ಶಾಖೆಗಳ ವತಿಯಿಂದ ಆಚರಿಸಲಾಯಿತು.

ತಾಲ್ಲೂಕು ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ತಹಶೀಲ್ದಾರ್ ರಮೇಶ ಕೋನರಡ್ಡಿ  ಸೇರಿದಂತೆ ಸಿಬ್ಬಂದಿ ವರ್ಗ ರಾಷ್ಟ್ರನಾಯಕ ಡಾ.ಬಾಬು ಜಗಜೀವನರಾಮ್‌ರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಆದರ್ಶಗಳ ಗುಣಗಾನ ಮಾಡಿದರು. 

ಡಾ. ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆ ಕಚೇರಿಯಲ್ಲಿ  ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ರವರ ಜಯಂತಿಯನ್ನು ನೆರವೇರಿಸಲಾಯಿತು. ಸಂಘದ ಗೌರವಾಧ್ಯಕ್ಷ ವೆಂಕಟೇಶ್ವರಲು, ಜಗನ್ನಾಥ್, ಶ್ರೀನಿವಾಸ, ಓಬಳೇಶ, ಹಾಗೂ ಪದಾಧಿಕಾರಿಗಳು,ಹಾಜರಿದ್ದರು.  ಗಾಂಧೀನಗರದ ಮುಖಂಡರಾದ ಓಬಳೇಶ, ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಮೇಶಾಕ್ ಅಂಕಾಳಿ, ಪ್ರಧಾನ ಕಾರ್ಯದರ್ಶಿ ಹೊನ್ನೂರ್ ಮತ್ತಿತರರು ಭಾಗವಹಿಸಿದ್ದರು.

ಹಳೇ ಮಲಪನಗುಡಿಯ ಡಾ. ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆ ಗ್ರಾಮ ಘಟಕವೂ ಕಚೇರಿಯಲ್ಲಿ  ಡಾ. ಬಾಬು ಜಗಜೀವನರಾಮ್ ರವರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿದರು. ಗೌರವಾಧ್ಯಕ್ಷ ಶಿವಪ್ಪ ಡಿ. ಅಧ್ಯಕ್ಷ ಗಂಗಾಧರ್ ಎಚ್.ಬಿ ಹಾಗೂ ಪದಾಧಿಕಾರಿಗಳು ಹಾಜರಿದ್ದು ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT