ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್, ನೈಟ್‌ಕ್ಲಬ್‌ಗಳಿಗೆ ನಸುಕಿನವರೆಗೆ ಅನುಮತಿ

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಬಾರ್, ಪಬ್, ನೈಟ್ ಕ್ಲಬ್‌ಗಳನ್ನು ನಸುಕಿನ ಒಂದು ಗಂಟೆಯವರೆಗೆ ತೆರೆಯಲು ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡಿದೆ.

ಕಳೆದ ಆರು ತಿಂಗಳ ಹಿಂದೆ ಮಧ್ಯರಾತ್ರಿ ಬಳಿಕ ಮದ್ಯ ಮಾರಾಟಕ್ಕೆ ನಿಷೇಧ ವಿಧಿಸಿದ ಅಬಕಾರಿ ಇಲಾಖೆ ಈಗ ನಿಯಮಕ್ಕೆ ತಿದ್ದುಪಡಿ ತಂದು ಕಠಿಣ ಷರತ್ತುಗಳು ಮೂಲಕ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಪ್ರತಿದಿನ ಹತ್ತು ಸಾವಿರ ರೂಪಾಯಿ ಪಾವತಿಸಿ ತಾತ್ಕಾಲಿಕ ಪರವಾನಗಿಯನ್ನು ಪಡೆದು ಹೋಟೆಲ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ನಸುಕಿನ ಒಂದು ಗಂಟೆವರೆಗೆ ಮದ್ಯ ಮಾರಾಟ ಮಾಡಬಹುದು ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರ ಭಾರಿ ಸಾಲದಿಂದ ತತ್ತರಿಸಿದ್ದು, ಅದನ್ನು ನಿವಾರಿಸಿಕೊಳ್ಳುವ ಸಲುವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT