ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಒತ್ತಾಯ

Last Updated 12 ಜೂನ್ 2012, 19:30 IST
ಅಕ್ಷರ ಗಾತ್ರ

 ನವದೆಹಲಿ (ಪಿಟಿಐ): ವಿವಿಧ ಕ್ಷೇತ್ರಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ತಡೆಯಲು ಮತ್ತು ಯುವ ಕಾರ್ಮಿಕರನ್ನೂ ಇದರ ವ್ಯಾಪ್ತಿಗೆ ಸೇರಿಸಲು ಈಗ ಜಾರಿಯಲ್ಲಿರುವ ಬಾಲ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಪ್ರತಿಪಾದಿಸಿದೆ.

ಬಾಲ ಕಾರ್ಮಿಕ ಪದ್ಧತಿ ಬಗ್ಗೆ ವ್ಯಾಪಕ ಅರಿವು ಕಾರ್ಯಕ್ರಮಗಳು ಕೈಗೊಂಡಿದ್ದರೂ ಜನರು ಈಗ ಹಾಲಿ ಕಾನೂನಿನಲ್ಲಿರುವ ಲೋಪಗಳನ್ನು ಬಳಸಿಕೊಳ್ಳುತ್ತಿರುವುದರಿಂದ ಈ ಪದ್ಧತಿ ದೇಶದಲ್ಲಿ ಇನ್ನೂ ಮುಂದುವರಿದಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಆಯೋಗದ ಅಧ್ಯಕ್ಷೆ ಶಾಂತಾ ಸಿನ್ಹಾ ಹೇಳಿದ್ದಾರೆ.

ಎನ್‌ಸಿಪಿಸಿಆರ್, ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆ ಮತ್ತು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಂಗಳವಾರ ಜಂಟಿಯಾಗಿ ಏರ್ಪಡಿಸಿದ್ದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾನೂನು ಪ್ರಕಾರ `ಮಗು~ ಮತ್ತು `ಬಾಲ ಕಾರ್ಮಿಕ~ ಎಂಬ ಪದವನ್ನು ಮರು ವ್ಯಾಖ್ಯಾನ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು.

 ಬಾಲಾಪರಾಧ ತಡೆ ಕಾಯ್ದೆ ಪ್ರಕಾರ `ಮಗು~ ಎಂಬ ವ್ಯಾಖ್ಯಾನ 18 ವರ್ಷದ ಒಳಗಿನವರಿಗೆ ಅನ್ವಯವಾಗುತ್ತದೆ. ಆದರೆ, ಬಾಲ ಕಾರ್ಮಿಕ ಕಾಯ್ದೆಯ ವ್ಯಾಪ್ತಿಗೆ ಹದಿಹರೆಯದವರು ಬರುವುದಿಲ್ಲ. ನಿಯಾಮನುಸಾರ ಅವರೂ ಕನಿಷ್ಠ ವೇತನ ಕಾಯ್ದೆಯ ವ್ಯಾಪ್ತಿಗೆ ಬರುತ್ತಾರೆ ಎಂದು ಒತ್ತಿ ಹೇಳಿದರು.

ಬಾಲ ಕಾರ್ಮಿಕರ ಕಾಯ್ದೆಯಲ್ಲಿನ ದೋಷಗಳನ್ನು ಸರಿಪಡಿಸಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ ಎಂದು ಸಮಾರಂಭದಲ್ಲಿ ಹಾಜರಿದ್ದ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ನೀಲಾ ಗಂಗಾಧರನ್ ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT