ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಬಂಧನ

Last Updated 2 ಜನವರಿ 2014, 19:30 IST
ಅಕ್ಷರ ಗಾತ್ರ

ಕಾರವಾರ: ಬಾಲಕಿಯನ್ನು ಪುಸಲಾ­ಯಿಸಿ ವಸತಿಗೃಹವೊಂದಕ್ಕೆ ಕರೆದು­ಕೊಂಡು ಹೋಗಿ ಅತ್ಯಾಚಾರ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಗುರು­ವಾರ ಬಂಧಿಸಿದ್ದಾರೆ.

ಹೊನ್ನಾವರ ತಾಲ್ಲೂಕಿನ ಅಳ್ಳಂಕಿಯ ನಾಗರಾಜ ಹೆಗಡೆ ಎಂಬಾತನನ್ನು ಬಂಧಿಸಲಾಗಿದೆ. ಬಾಲಕಿ ನಾಪತ್ತೆಯಾದ ಬಗ್ಗೆ ಹೊನ್ನಾವರ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಾಗ, ಬಾಲಕಿಯು ಅಂಕೋಲಾ ತಾಲ್ಲೂಕಿನ ವಸತಿಗೃಹವೊಂದರಲ್ಲಿ ಇರುವುದು ಪತ್ತೆಯಾಯಿತು.

ನಾಗರಾಜ ಹೆಗಡೆ ಪುಸಲಾಯಿಸಿ ಅಂಕೋಲಾಕ್ಕೆ ಕರೆದುಕೊಂಡು ಬಂದು, ವಸತಿಗೃಹದಲ್ಲಿ ಅತ್ಯಾಚಾರ ಮಾಡಿ­ದ್ದಾನೆಂದು ಬಾಲಕಿಯು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾಳೆ. ಆರೋಪಿಯನ್ನು ಬಂಧಿಸಿ ನ್ಯಾಯಾ­ಲಯಕ್ಕೆ ಹಾಜರು­ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT