ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕೃಷ್ಣೇಗೌಡ ವಿಚಾರಣೆ ಅ.26ಕ್ಕೆ ಮುಂದೂಡಿಕೆ

Last Updated 10 ಅಕ್ಟೋಬರ್ 2011, 8:45 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹಿರಿಯ ಪುತ್ರ ಎಚ್.ಡಿ.ಬಾಲಕೃಷ್ಣೇಗೌಡ ಅವರ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಸೋಮವಾರ ಅಕ್ಟೋಬರ್ 26ಕ್ಕೆ ಮುಂದೂಡಿದೆ.

ಕೆಎಎಸ್ ಅಧಿಕಾರಿಯಾಗಿದ್ದ ಎಚ್.ಡಿ.ಬಾಲಕೃಷ್ಣೇಗೌಡ ಅವರು 2005ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಅವರು 77 ಕೋಟಿ ರೂಪಾಯಿ ಮೊತ್ತದ ಆಸ್ತಿ ಖರೀದಿಸಿದ್ದರು. ಆದರೆ, ಅವರ ಒಟ್ಟು ಸೇವಾ ಅವಧಿಯಲ್ಲಿನ ಅಧಿಕೃತ ಆದಾಯ ಕೇವಲ 30 ಲಕ್ಷ ರೂಪಾಯಿ ಆಗಿತ್ತು ಎಂದು ದೂರಿ ಭದ್ರಾವತಿಯ ಎಸ್.ಎನ್.ಬಾಲಕೃಷ್ಣ  ಅವರು  `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಸ್ವಯಂನಿವೃತ್ತಿ ಪಡೆದ ಕೆಲವೇ ದಿನಗಳಲ್ಲಿ ಬಾಲಕೃಷ್ಣೇಗೌಡ ಅವರು ಬೆಂಗಳೂರು ನಗರ ಮತ್ತು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಭೂಮಿ, ವಾಣಿಜ್ಯ ಕಟ್ಟಡಗಳನ್ನು ಖರೀದಿಸಿದ್ದಾರೆ. ವಿವಿಧ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ ಎಂದು ಬಾಲಕೃಷ್ಣ ದೂರಿದ್ದರು.

ಸೋಮವಾರ ವಿಚಾರಣೆ ಆರಂಭವಾಗುತ್ತಿದ್ದಂತೆಯೇ ದೂರಿನಲ್ಲಿನ ಆರೋಪಗಳ ಕುರಿತ ನಡೆಸಿದ ತನಿಖೆಯ ಪ್ರಗತಿಯನ್ನು ಪರಿಶೀಲಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT