ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್‌ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ನಾಳೆ

Last Updated 19 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬಾಲ್‌ ಬ್ಯಾಡ್ಮಿಂಟನ್‌ ಸಂಸ್ಥೆ ಮತ್ತು ಚಾಮರಾಜ ನಗರ ಜಿಲ್ಲೆ ಬಾಲ್‌ ಬ್ಯಾಡ್ಮಿಂಟನ್‌ ಸಂಸ್ಥೆ ಗಳ ಜಂಟಿ ಆಶ್ರಯದಲ್ಲಿ ಶನಿವಾರ ಮತ್ತು ಭಾನುವಾರ ರಾಜ್ಯ ಸೀನಿಯರ್‌ ಬಾಲ್‌ಬ್ಯಾಡ್ಮಿಂಟನ್‌ ಲೀಗ್‌ ಚಾಂಪಿಯನ್‌ಷಿಪ್‌ ನಡೆಯಲಿದೆ.

ಈ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವ ತಂಡಗಳು ಶುಕ್ರವಾರ ಸಂಜೆ 4ಗಂಟೆಗೆ ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದ ಬಳಿ ಹಾಜರಿರಬೇಕು ಎಂದು ರಾಜ್ಯ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪುರುಷರ ವಿಭಾಗದಲ್ಲಿ ಸುಮಾರು 24 ಮತ್ತು ಮಹಿಳಾ ವಿಭಾಗದಲ್ಲಿ 15 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಟೂರ್ನಿಯಲ್ಲಿ ತೋರುವ ಸಾಮರ್ಥ್ಯದ ಆಧಾರದ ಮೇಲೆ ಮುಂಬರುವ ರಾಷ್ಟ್ರೀಯ ಸೀನಿಯರ್‌ ಚಾಂಪಿಯನ್‌ಷಿಪ್‌ ಮತ್ತು ಫೆಡರೇಷನ್‌ ಕಪ್‌ ಟೂರ್ನಿಗಳಿಗೆ ರಾಜ್ಯ ತಂಡವನ್ನು ಆಯ್ಕೆ ನಡೆಸಲಾಗುವುದು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT