ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ವಿರುದ್ಧ ಕ್ರಮ ಏಕಿಲ್ಲ?

Last Updated 16 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ನಡೆದ ಬಿಜೆಪಿ ರಾಜ್ಯ ಪ್ರಮುಖರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಹಿರಿಯ ಮುಖಂಡರ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ `ಬಿಜೆಪಿ ಹಿರಿಯರ ವೇದಿಕೆ~ಯ ಅಧ್ಯಕ್ಷ ಬಿ.ಬಿ. ಶಿವಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

`ಯಡಿಯೂರಪ್ಪ ಅವರು ನಿಮ್ಮ ಸಮ್ಮುಖದಲ್ಲಿಯೇ ಪಕ್ಷದ ಹಿರಿಯ ನಾಯಕರ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಪಕ್ಷದ ಇಂದಿನ ಸ್ಥಿತಿಗೆ ಹೈಕಮಾಂಡ್ ಕಾರಣ ಎಂದಿದ್ದಾರೆ. ಇಂಥ ಹೇಳಿಕೆ ನೀಡಿದ ಯಡಿಯೂರಪ್ಪ ಅವರ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸುವುದಿಲ್ಲವೇ~ ಎಂದು ಶಿವಪ್ಪ ಅವರು ಪತ್ರದಲ್ಲಿ ಈಶ್ವರಪ್ಪ ಅವರನ್ನು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮಾಡಬೇಕಾದ ಸಂದರ್ಭದಲ್ಲೂ ಪಕ್ಷದ ಶಾಸಕರು ಮಾಧ್ಯಮಗಳಿಗೆ ಮನಬಂದಂತೆ ಹೇಳಿಕೆ ನೀಡಿದರು. ಇದರಿಂದ ಪಕ್ಷದ ಗೌರವವೂ ಹಾಳಾಯಿತು. ಅವರ ವಿರುದ್ಧವೂ ಪಕ್ಷ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

`ಬಿಜೆಪಿಯಲ್ಲಿ ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಹಿರಿಯ ನಾಯಕರಾದ ನೀವೇ ಇಂಥ ಸಂದರ್ಭದಲ್ಲಿ ದಿಟ್ಟತನ ತೋರದಿದ್ದರೆ ಪಕ್ಷದ ಸ್ಥಿತಿ ಏನಾಗಬಹುದು ಎಂಬ ಆತಂಕ ಮೂಡುತ್ತಿದೆ~ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT