ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈಗೆ ಮುಳುವಾದ ಎರಡು ದೂರು

Last Updated 15 ಅಕ್ಟೋಬರ್ 2011, 19:55 IST
ಅಕ್ಷರ ಗಾತ್ರ

ಬೆಂಗಳೂರು: ವಕೀಲರಾದ ಸಿರಾಜಿನ್ ಬಾಷಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಲ್ಲಿಸಿದ್ದ ಎರಡು ಮತ್ತು ಮೂರನೇ ಖಾಸಗಿ ದೂರಿನ ವಿವರಗಳು ಇಂತಿವೆ:

ದೂರು- 2
1- ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಸಬಾ ಹೋಬಳಿಯ ಅರಕೆರೆ ಗ್ರಾಮದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 2.05 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವುದು. ಬಳಿಕ ಮುಖ್ಯಮಂತ್ರಿಯವರ ಕುಟುಂಬದ ಸದಸ್ಯರ ಬೇನಾಮಿದಾರರು ಅದನ್ನು ಖರೀದಿಸಿರುವುದು.

2- ಬೆಂಗಳೂರು ದಕ್ಷಿಣ ತಾಲ್ಲೂಕಿನ ದೇವರಚಿಕ್ಕನಹಳ್ಳಿಯ ಸರ್ವೇ ನಂಬರ್ 51/1ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಮುಖ್ಯಮಂತ್ರಿಯವರ ಸಹಚರ ಕೆ.ಮಂಜುನಾಥ್ ಅವರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಡಿನೋಟಿಫೈ ಮಾಡಿರುವುದು.

3- ಅರ್ಕಾವತಿ ಬಡಾವಣೆಗಾಗಿ ಗೆದ್ದಲಹಳ್ಳಿಯ ಸರ್ವೇ ನಂಬರ್ 42/1ಎ2, 42/4-ಎ2 ಮತ್ತು 42/2ಬಿಗಳಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಮುಖ್ಯಮಂತ್ರಿಯವರ ಸಹಚರರಾದ ವಿ.ಮಂಜುನಾಥ್ ಮತ್ತು ಕೆ.ಶಿವಪ್ಪ ಅವರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಡಿನೋಟಿಫೈ ಮಾಡಿರುವುದು.

ದೂರು- 3
1-ಅಗರ ಗ್ರಾಮದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 20 ಗುಂಟೆ ಭೂಮಿಯನ್ನು ಅಕ್ರಮವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವುದು.

2- ರಾಚೇನಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಡಿನೋಟಿಫೈ ಮಾಡಿರುವುದಕ್ಕಾಗಿ ಹೆಲ್ತ್‌ಝೋನ್ ಅಡ್ವೈಸರ್ಸ್‌ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಅದೇ ಗ್ರಾಮದ ಸರ್ವೇ ನಂಬರ್ 36/1 ಮತ್ತು 37/2ರಲ್ಲಿ ಭೂಮಿ ಪಡೆದಿರುವುದು.

9- ಉತ್ತರಹಳ್ಳಿಯ ಸರ್ವೇ ನಂಬರ್ 121ರ 10 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿರುವುದಕ್ಕಾಗಿ ಸಹ್ಯಾದ್ರಿ ಹೆಲ್ತ್‌ಕೇರ್ ಅಂಡ್ ಡಯಾಗ್ನಾಸ್ಟಿಕ್ಸ್ ಮೂಲಕ ಆರ್ಥಿಕ ಅನುಕೂಲ ಪಡೆದಿರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT