ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಚೇರಿ ಬಳಿ ಸ್ಫೋಟ: ಮೂವರ ಬಂಧನ

Last Updated 23 ಏಪ್ರಿಲ್ 2013, 10:10 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಮಲ್ಲೇಶ್ವರದಲ್ಲಿ ಬಿಜೆಪಿ ಕಚೇರಿ ಬಳಿ ಕಳೆದವಾರ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಸೋಮವಾರ ತಡರಾತ್ರಿ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋಹಿದೀನ್ ಮತ್ತು ಬಶೀರ್ ಎಂಬ ಆರೋಪಿಗಳನ್ನು ತಿರುನಲ್ವೇಲಿಯಲ್ಲಿ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಯನ್ನು ಮಧುರೈನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳನ್ನು ಬೆಂಗಳೂರಿಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT