ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ- ಜೆಡಿಯು ಭಿನ್ನಮತ ಉಲ್ಬಣ

Last Updated 15 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಜನತಾ ದಳ (ಯು) ಮತ್ತು ಬಿಜೆಪಿಯ ಮಧ್ಯೆ ಭಿನ್ನಾಭಿಪ್ರಾಯ ಸೋಮವಾರ ಉಲ್ಬಣಗೊಂಡಿದ್ದು, ಗುಜರಾತ್ ಮುಖ್ಯಮಂತ್ರಿ ಮೋದಿಯನ್ನು ಟೀಕಿಸಿರುವ ಬಿಹಾರ್ ಮುಖ್ಯಮಮತ್ರಿಯನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಮೋದಿ ಅವರ ಜಾತ್ಯತೀತ ಧೋರಣೆಯ ಬಗ್ಗೆ  ನಿತೀಶ್ ಕುಮಾರ್ ಪ್ರಮಾಣ ಪತ್ರ ನೀಡುವ ಅಗತ್ಯವಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

2002ರ ಗೋದ್ರಾ ಘಟನೆಯ ನಂತರವೂ ಜೆಡಿಯು ಎನ್‌ಡಿಎದಲ್ಲಿ ಮುಂದುವರಿದುಕೊಂಡು ಬಂದಿದೆ ಎನ್ನುವುದನ್ನು ನಿತೀಶ್ ಮರೆಯಬಾರದು ಎಂದು ಬಿಜೆಪಿಯ ವಕ್ತಾರೆ ಮೀನಾಕ್ಷಿ ಲೇಖಿ ಹೇಳಿದ್ದಾರೆ. ನಿತೀಶ್ ಅವರು ಭಾನುವಾರ, ಮೋದಿ ವಿರುದ್ಧ ಮಾಡಿರುವ ವಾಗ್ದಾಳಿಯಿಂದ ಅವರು ಎನ್‌ಡಿಎಯಿಂದ ಶಾಶ್ವತವಾಗಿ ದೂರ ಸರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂಬುದು ಬಹುತೇಕ ಮುಖಂಡರ ಅಭಿಪ್ರಾಯವಾಗಿದೆ.

ಮೋದಿ ಅವರನ್ನು ಸಮರ್ಥಿಸಿಕೊಂಡಿರುವ ಲೇಖಿ ಅವರು, ಪ್ರಧಾನಿ ಹುದ್ದೆಯ ಅಭ್ಯರ್ಥಿ ವಿಚಾರದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಜೆಡಿಯು ಎನ್‌ಡಿಎಯಿಂದ ದೂರವಾಗುವ ಮಾತು ಈಗ ಅಪ್ರಸ್ತುತ ಎಂದಿದ್ದಾರೆ. ಎನ್‌ಡಿಎ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಮೊದಲು ಎಲ್ಲಾ ಮಿತ್ರ ಪಕ್ಷಗಳ ಅಭಿಪ್ರಾಯ ಪಡೆಯಲಾಗುತ್ತದೆ.

ಇದರರ್ಥ ಬಿಜೆಪಿ ಸೈದ್ಧಾಂತಿಕ ವಿಚಾರದಲ್ಲಿ ರಾಜಿ ಮಾಡಿಕೊಳ್ಳುತ್ತದೆ ಎಂದಲ್ಲ ಎಂದು ತಿಳಿಸಿದ್ದಾರೆ. ಬಿಹಾರ ನಿಯೋಗದ ಆಗ್ರಹ: ನಿತೀಶ್ ಕುಮಾರ್ ಅವರು ಪದೇ ಪದೇ ನರೇಂದ್ರ ಮೋದಿಯನ್ನು ಟೀಕಿಸುತ್ತಿರುವುದರಿಂದ ಜೆಡಿಯು ಜತೆಗಿನ ಸಂಬಂಧವನ್ನು ಕಳಚಿಕೊಳ್ಳುವಂತೆ ಬಿಹಾರದ ಬಿಜೆಪಿ ನಿಯೋಗವು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT