ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರ ವಿಚಾರಣೆಗೂ ನಿರ್ಧಾರ

Last Updated 14 ಸೆಪ್ಟೆಂಬರ್ 2011, 19:35 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯದ ಮಾಜಿ ಸಚಿವ ಜನಾರ್ದನರೆಡ್ಡಿ ಒಡೆತನದ `ಓಬಳಾಪುರಂ ಮೈನಿಂಗ್ ಕಂಪೆನಿ~ಯ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಕೆಲ ಹಿರಿಯ ಬಿಜೆಪಿ ನಾಯಕರೂ ಸೇರಿದಂತೆ ಹಲವು ಗಣ್ಯರನ್ನು ವಿಚಾರಣೆಗೆ ಒಳಪಡಿಸುವ ಸಂಭವವಿದೆ.

ಈಗಾಗಲೇ ಬಂಧಿತರಾಗಿ ಸಿಬಿಐ ವಶದಲ್ಲಿರುವ ರಾಜ್ಯದ ಮಾಜಿ ಸಚಿವ ಜನಾರ್ದನರೆಡ್ಡಿ ಹಾಗೂ ಅವರ ಸಂಬಂಧಿ ಶ್ರೀನಿವಾಸ ರೆಡ್ಡಿ ಅವರ ಜತೆ ಕ್ರಿಮಿನಲ್ ಆರೋಪದಲ್ಲಿ ಭಾಗಿಯಾಗಿರುವ ಎಲ್ಲರನ್ನು ವಿಚಾರಣೆಗೊಳಪಡಿಸಲಾಗುವುದು.

ಈ ವ್ಯಕ್ತಿಗಳು ಎಷ್ಟೇ ದೊಡ್ಡವರಿದ್ದರೂ ಸರಿ, ತನಿಖಾ ಸಂಸ್ಥೆ ತನ್ನ ಪಾಲಿನ ಕೆಲಸವನ್ನು ಮುಲಾಜಿಲ್ಲದೆ ನಿರ್ವಹಿಸಲಿದೆ ಎಂದು ಸಿಬಿಐ ಮೂಲಗಳು ಸ್ಪಷ್ಟಪಡಿಸಿವೆ.

ಓಎಂಸಿ ನಿರ್ದೇಶಕರಾದ ಮಾಜಿ ಸಚಿವ ಕರುಣಾಕರ ರೆಡ್ಡಿ, ಬಿ. ಶ್ರೀರಾಮುಲು ಆದಿಯಾಗಿ ಜನಾರ್ದನರೆಡ್ಡಿ ಅವರ ಕುಟುಂಬದ ಎಲ್ಲ ಸದಸ್ಯರನ್ನು ವಿಚಾರಣೆ ಮಾಡಲಾಗುವುದು. ವಿಚಾರಣೆಗೆ ಸ್ನೇಹ ಸಂಬಂಧಗಳು ಆಧಾರವಾಗುವುದಿಲ್ಲ. ಬದಲಿಗೆ ರೆಡ್ಡಿ ಎದುರಿಸುತ್ತಿರುವ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಯಾರನ್ನೂ ಬಿಡುವುದಿಲ್ಲ ಎನ್ನಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT