ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ: ರಾಮ್ ಜೇಠ್ಮಲಾನಿ ಆಗ್ರಹ

Last Updated 17 ಅಕ್ಟೋಬರ್ 2012, 9:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮುಂದಿನ ಲೋಕಸಭಾ ಚುನಾವಣೆಯಲ್ಲಿ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಂಬಿಸಬೇಕು ಎಂಬುದಾಗಿ ಪ್ರಬಲ ವಾದ ಮಂಡಿಸುವ ಮೂಲಕ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಅವರು ಬಿಜೆಪಿಯ ಕಣಜದ ಗೂಡಿಗೆ ಕೈಹಾಕಿದ್ದಾರೆ.

ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಪತ್ರವೊಂದನ್ನು ಬರೆದಿರುವ ರಾಮ್ ಜೇಠ್ಮಲಾನಿ, 2014ರಚುನಾವಣಾ ಪೂರ್ವ ಪ್ರಚಾರದಲ್ಲಿ ಮತದಾರರನ್ನು ಸಮಾಧಾನಪಡಿಲು ಪಕ್ಷವು ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

~ಆಯ್ಕೆ ಕಷ್ಟಕರ ಎಂದು ನನಗೆ ಅನಿಸುವುದಿಲ್ಲ. ಪ್ರಾಮಾಣಿಕತೆ ಮತ್ತು ಆಡಳಿತಾತ್ಮಕ ದಕ್ಷತೆ ವಿಚಾರದಲ್ಲಿ ಯಾವುದೇ ಸಂಶಯ ಕೂಡಾ ಇಲ್ಲದ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದು ನಾನು ಬಯಸುವೆ~ ಜೇಠ್ಮಲಾನಿ ತಮ್ಮ ಎರಡು ಪುಟಗಳ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ಹುದ್ದೆಗೆ ಹಲವಾರು ಮಂದಿ ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಪಕ್ಷವು ಪ್ರಧಾನಿ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. ಈ ಪರಿಸ್ಥಿತಿಯಲ್ಲಿ ಪತ್ರ ಬರೆದಿರುವ ಜೇಠ್ಮಲಾನಿ ~ಸೂರಜ್ ಕುಂಡದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಾನು ಪಾಲ್ಗೊಳ್ಳಬಯಸಿದ್ದೆ. ಆದರೆ ತಮಗೆ ಆಮಂತ್ರಣ ಬರಲಿಲ್ಲ~ ಎಂದು ಹೇಳಿದರು.

~ಮೋದಿ ಅವರನ್ನು ಅಲ್ಪಸಂಖ್ಯಾತ ವಿರೋಧಿ ಎಂಬುದಾಗಿ ಬಿಂಬಿಸುವ ಕುತ್ಸಿತ ಪ್ರಚಾರಕ್ಕೆ ಮೋದಿ ಅವರನ್ನು ಬಲಿಪಶು ಮಾಡಲಾಗಿದೆ. ಅಯೋಗ್ಯವಾದ ಈ ಕಪ್ಪು ಕಲೆಯನ್ನು ಅಳಿಸುವುದು ಸುಲಭ. ಅಭ್ಯರ್ಥಿಯಾಗಬಯಸುವ ಪ್ರತಿಯೊಬ್ಬ ವ್ಯಕ್ತಿಯೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಮತ್ತು ತಮ್ಮ ಅನರ್ಹತೆಗಳನ್ನು ಅರಿತುಕೊಳ್ಳಬೇಕು ಎಂದು ಜೇಠ್ಮಲಾನಿ ನುಡಿದರು.

ಅಲ್ಪಸಂಖ್ಯಾತರ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ನಾಯಕ ~ಅಲ್ಪ ಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಮತ್ತು ಸಮೃದ್ಧಿ ಸಾಧನೆಗೆ ಅವಕಾಶಗಳ ಖಚಿತ ಭರವಸೆ ನೀಡಬೇಕು ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT